ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಡಿಹಳ್ಳಿ ಎರಡು ತಲೆ ಹಾವು, ಸಮಾಜಘಾತುಕ ಶಕ್ತಿಗೆ ಆತ ಉದಾಹರಣೆ: ಈಶ್ವರಪ್ಪ ಗರಂ

ಶಿವಮೊಗ್ಗ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಎರಡು ತಲೆ ಹಾವು ಇದ್ದಂತೆ. ಹಾಗಾಗಿ ಇಂತಹ ವ್ಯಕ್ತಿಗಳನ್ನು ಸಂಘಟನೆಗಳಾಗಲಿ, ರಾಜ್ಯದ ಜನರಾಗಲಿ ನಂಬಬಾರದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಸಾರಿಗೆ ನೌಕರರು ಕಳೆದ 4 ದಿನದಿಂದ ನಡೆಸುತ್ತಿರುವ ಮುಷ್ಕರಕ್ಕೆ ಸರ್ಕಾರ ಸ್ಪಂದಿಸಿ ಅವರ 9 ಬೇಡಿಕೆಗಳನ್ನು ಈಡೇರಿಸಿದೆ. ಆದರೂ ನೌಕರರು ಕೋಡಿಹಳ್ಳಿ ಚಂದ್ರಶೇಖರ್ ಮಾತನ್ನು ನಂಬಿ ಹಾಳಾಗುತ್ತಿದ್ದಾರೆ. ಒಂದು ವೇಳೆ ಎಸ್ಮಾ ಜಾರಿಯಾದರೆ ಗತಿ ಏನು. ನೌಕರರ ಕುಟುಂಬಕ್ಕೆ ಕೋಡಿಹಳ್ಳಿ ಜವಾಬ್ದಾರರು ಆಗುತ್ತಾರಾ ಎಂದು ಪ್ರಶ್ನಿಸಿದರು.

ಕೋಡಿಹಳ್ಳಿ ಚಂದ್ರಶೇಖರ್ ಸಮಾಜಘಾತುಕ ಶಕ್ತಿಗೆ ಉದಾಹರಣೆಯಾಗಿದ್ದಾರೆ. ರಾಜ್ಯದಲ್ಲಿ ಅಶಾಂತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದಾರೆ. ನೌಕರರು ಕರ್ತವ್ಯಕ್ಕೆ ಹಾಜರಾಗಲು ಮುಂದಾದರೆ ಕೋಡಿಹಳ್ಳಿ ನೌಕರರಿಗೆ ದಾರಿ ತಪ್ಪಿಸುತ್ತಿದ್ದಾರೆ ಎಂದು ಕಿಡಿಕಾರಿದರು.

Edited By : Vijay Kumar
PublicNext

PublicNext

14/12/2020 02:48 pm

Cinque Terre

55.69 K

Cinque Terre

3

ಸಂಬಂಧಿತ ಸುದ್ದಿ