ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬರ್ತಡೇ ಆಚರಣೆ ಬೇಡ ಎಂದ ಕುಮಾರಸ್ವಾಮಿ

ಬೆಂಗಳೂರು: ಕೊರೊನಾ ಸಂಕಷ್ಟದಲ್ಲಿ ಸಿಲುಕಿ ಇಡೀ ನಾಡಿನ ಜನತೆ ಸಂಕಷ್ಟದಲ್ಲಿದ್ದಾರೆ. ಈ ಸಂಬರ್ಭದಲ್ಲಿ ಬರ್ತಡೇ ಸಂಭ್ರಮ ಸಲ್ಲದು ಎಂದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಮ್ಮ ಹುಟ್ಟುಹಬ್ಬ ಆಚರಿಸಿದಿರಲು ನಿರ್ಧರಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, ಡಿ.16 ನನ್ನ‌ ಜನ್ಮದಿನ. ಕೊರೊನಾ ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದೇನೆ. ಆ ದಿನ ಬೆಂಗಳೂರಿನಲ್ಲಿ ನಾನು ಲಭ್ಯವಿರುವುದಿಲ್ಲ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ನೀವೆಲ್ಲ ಎಲ್ಲಿರುತ್ತೀರೋ ಅಲ್ಲಿಂದಲೇ ನನ್ನನ್ನು ಹಾರೈಸಿ ಎಂದು ತಿಳಿಸಿದರು. ಇನ್ನು ನಿಮ್ಮ ಪ್ರೀತಿ ಅಭಿಮಾನ ದೊಡ್ಡದು. ಪ್ರತಿ ಜನ್ಮದಿನಗಳು ನಮ್ಮ ಇರುವಿಕೆಯನ್ನು ನೆನಪಿಸುತ್ತವೆ. ಬದುಕಿದ್ದಷ್ಟು ದಿನ ಕಷ್ಟದಲ್ಲಿರುವ ಜನರ ಒಳಿತಿಗೆ ನಿಸ್ವಾರ್ಥ ಭಾವದಿಂದ, ಕಾರುಣ್ಯಭರಿತವಾಗಿ ದುಡಿದಾಗ ನಮ್ಮ‌ ಹುಟ್ಟು ಸಾರ್ಥಕವಾಗುತ್ತದೆ ಎಂಬುದು ನನ್ನ ನಂಬಿಕೆ ಮತ್ತು ನಡೆ ಎಂದು ತಿಳಿಸಿದರು.

Edited By : Nagaraj Tulugeri
PublicNext

PublicNext

14/12/2020 03:52 pm

Cinque Terre

59.27 K

Cinque Terre

2

ಸಂಬಂಧಿತ ಸುದ್ದಿ