ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊನೆಗೂ ಸಾರಿಗೆ ನೌಕರರ ಮುಷ್ಕರ ಅಂತ್ಯ: ಸಂಜೆಯಿಂದಲೇ ಬಸ್‌ ಸಂಚಾರ ಶುರು

ಬೆಂಗಳೂರು: 4 ದಿನಗಳಿಂದ ನಡೆಯುತ್ತಿರುವ ಸಾರಿಗೆ ನೌಕರರ ಮುಷ್ಕರ ಅಂತ್ಯಗೊಂಡಿದ್ದು, ರಾಜ್ಯ ಸರ್ಕಾರ ಮತ್ತು ಸಾರಿಗೆ ನೌಕರರ ಸಂಘರ್ಷಕ್ಕೆ ತಾತ್ಕಾಲಿಕ ಸಮಾಪ್ತಿ ದೊರಕಿದೆ. ಈ ಮೂಲಕ ಇಂದು ಸಂಜೆಯಿಂದಲೇ ಸರ್ಕಾರಿ ಬಸ್‌ಗಳ ಸಂಚಾರ ಆರಂಭವಾಗಲಿವೆ.

ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಮಧ್ಯಾಹ್ನ ಬೇಡಿಕೆ ಒಪ್ಪಿರುವ ಬಗ್ಗೆ ಪತ್ರ ಕಳುಹಿಸಿದ್ದರು. ಈ ಬೆನ್ನಲ್ಲೇ ನೌಕರರ ಸಂಘದ ಮುಖಂಡರು ಸಭೆ ನಡೆಸಿ ಮಷ್ಕರವನ್ನು ಕೈ ಬಿಡುವ ತೀರ್ಮಾನವನ್ನು ತೆಗೆದುಕೊಂಡರು.

ಈ ಕುರಿತು ಫ್ರೀಡಂ ಪಾರ್ಕ್ ನಲ್ಲಿ ಘೋಷಣೆ ಹೊರಡಿಸಿದ ಕೋಡಿಹಳ್ಳಿ ಚಂದ್ರಶೇಖರ್, ಸಾರಿಗೆ ನೌಕರರ 10 ಬೇಡಿಕೆಗಳಲ್ಲಿ ಸರ್ಕಾರ 9 ಅನ್ನು ಈಡೇರಿಸಿದೆ. ಸಾರಿಗೆ ಸಿಬ್ಬಂದಿಯನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂಬ ಬೇಡಿಕೆಯೊಂದೇ ಬಾಕಿ ಉಳಿದಿದೆ. ಇದರ ಈಡೇರಿಕೆಗಾಗಿ ಸರ್ಕಾರಕ್ಕೆ 3 ತಿಂಗಳ ಗಡುವು ನೀಡಲಾಗಿದೆ. ಒಂದು ವೇಳೆ 3 ತಿಂಗಳೊಳಗಾಗಿ ಸರ್ಕಾರ ನಮ್ಮ ಮನವಿಯನ್ನು ಪರಿಗಣಿಸದಿದ್ದರೇ ಮತ್ತೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Edited By : Vijay Kumar
PublicNext

PublicNext

14/12/2020 04:36 pm

Cinque Terre

188.89 K

Cinque Terre

8

ಸಂಬಂಧಿತ ಸುದ್ದಿ