ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಅವರು ಡಿಸೆಂಬರ್ 17ರಂದು ಆನ್‌ಲೈನ್ ಮುಖಾಂತರ ನಡೆಯಲಿರುವ ಶೃಂಗಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯವು ಸೋಮವಾರ ತಿಳಿಸಿದೆ.
ಈ ವೇಳೆ ಭಾರತ ಮತ್ತು ಬಾಂಗ್ಲಾದೇಶ ನಡುವಿನ ದ್ವಿಪಕ್ಷೀಯ ಸಂಬಂಧದ ಹಲವು ವಿಷಯಗಳ ಕುರಿತು ಚರ್ಚೆ ನಡೆಯವಿದೆ. ಕೋವಿಡ್ ಪಿಡುಗು ಮುಕ್ತಾಯವಾದ ಬಳಿಕ ಎರಡೂ ರಾಷ್ಟ್ರಗಳ ನಡುವಿನ ಸಹಕಾರವನ್ನು ಮತ್ತಷ್ಟು ಸದೃಢಗೊಳಿಸುವ ಕುರಿತೂ ನಾಯಕರು ಚರ್ಚೆ ನಡೆಸಲಿದ್ದಾರೆ ಎಂದು ಸಚಿವಾಲಯವು ಮಾಹಿತಿ ನೀಡಿದೆ.
ಕಳೆದ ಕೆಲ ವರ್ಷದಿಂದ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಸಂಬಂಧವು ವೃದ್ಧಿಯಾಗಿದೆ. ಮೂಲಸೌಕರ್ಯ ಯೋಜನೆ ಸೇರಿದಂತೆ ಎರಡೂ ರಾಷ್ಟ್ರಗಳು ವಾಣಿಜ್ಯ ಮತ್ತು ಆರ್ಥಿಕ ಚಟುವಟಿಕೆ ಹೆಚ್ಚಿಸಿವೆ ಎಂದು ಸಚಿವಾಲಯವು ತಿಳಿಸಿದೆ.
PublicNext
14/12/2020 08:21 pm