ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗೋಹತ್ಯೆ ನಿಷೇಧ ಮಸೂದೆಗೆ ದೇವೇಗೌಡ ವಿರೋಧ: ಸರ್ಕಾರ ಅಲ್ಲೋಲ ಕಲ್ಲೋಲ ಮಾಡುತ್ತಿದೆ

ಬೆಂಗಳೂರು: ಗೋಹತ್ಯೆ ನಿಷೇಧ ಮಸೂದೆ ಮಂಡನೆಗೆ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡ ವಿರೋಧ ವ್ಯಕ್ತಪಡಿದ್ದಾರೆ. ಈ ಮಸೂದೆ ಮಂಡನೆ ಮೂಲಕ ಬಿಜೆಪಿ ಸರ್ಕಾರ ಜನರ ಬದುಕಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಲು ಹೊರಟಿದೆ ಎಂದಿದ್ದಾರೆ.

ಮಸೂದೆ ಕುರಿತಾಗಿ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬಿಜೆಪಿ ಸರ್ಕಾರ 2010 ರಲ್ಲಿ ಈ ಕಾಯ್ದೆಯನ್ನು ಜಾರಿಗೆ ತರಲು ಮುಂದಾಗಿತ್ತು. ಆದರೆ ಅದಕ್ಕೆ ಅವತ್ತೇ ವಿರೋಧ ಮಾಡಿದ್ದೆ. ಈ ಗೋಹತ್ಯೆ ನಿಷೇಧಕ್ಕೆ ಜೆಡಿಎಸ್ ಬೆಂಬಲ ನೀಡುವುದಿಲ್ಲ ಎಂದು ದೇವೇಗೌಡ ಸ್ಪಷ್ಟವಾಗಿ ಹೇಳಿದ್ದಾರೆ.

ರಾಜ್ಯಪಾಲರು ಹಾಗೂ ರಾಷ್ಟ್ರಪತಿಗಳಿಗೆ ಪತ್ರ ಬರೆದು ಈ ಮಸೂದೆಗೆ ಒಪ್ಪಿಗೆ ನೀಡಬಾರದು ಎಂದು ಮನವಿ ಮಾಡಿದ್ದೆವು. ನಂತರ ಸರ್ಕಾರ ಬದಲಾಗಿ ಈ ಮಸೂದೆ ಹಿಂಪಡೆಯಲಾಗಿತ್ತು. ಆದರೆ ಮತ್ತೊಮ್ಮೆ ಇದೇ ಮಸೂದೆಯನ್ನು ತರಲು ಬಿಜೆಪಿ ಸರ್ಕಾರ ಹೊರಟಿದೆ. ಇದಕ್ಕೆ ಜೆಡಿಎಸ್ ಪಕ್ಷದಿಂದ ಸಂಪೂರ್ಣ ವಿರೋಧವಿದೆ ಎಂದು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

Edited By : Nagaraj Tulugeri
PublicNext

PublicNext

15/12/2020 11:25 am

Cinque Terre

122.91 K

Cinque Terre

50

ಸಂಬಂಧಿತ ಸುದ್ದಿ