ನವದೆಹಲಿ: ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಮಸೂದೆಗಳನ್ನು ವಿರೋಧಿಸಿ ದೆಹಲಿ ಗಡಿ ಸೇರಿದಂತೆ ದೇಶಾದ್ಯಂತ ರೈತರ ಹೋರಾಟ ಭುಗಿಲೆದ್ದಿದೆ. ಈ ಹಿನ್ನಲೆಯಲ್ಲಿ ನಾಳೆ ಕೇಂದ್ರದ ಸಚಿವ ಸಂಪುಟ ಸಭೆ ನಡೆಯಲಿದೆ.
ನಾಳೆ ಬೆಳಿಗ್ಗೆ 11.25ರ ಸುಮಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಹಲವು ದಿನಗಳಿಂದಲೂ ರೈತರು ದೆಹಲಿ ಗಡಿ ಪ್ರದೇಶದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಮಸೂದೆ ರದ್ದುಪಡಿಸುವಂತೆ ಆಗ್ರಹಿಸುತ್ತಿದ್ದಾರೆ. ಪ್ರತಿಭಟನೆ ಸಮಯದಲ್ಲೇ ಸಂಪುಟ ಸಭೆ ನಡೆಯುತ್ತಿರುವುದು ಕುತೂಹಲವನ್ನು ಮೂಡಿಸಿದೆ.
PublicNext
15/12/2020 03:15 pm