ಚಂಡೀಗಢ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಶಿರೋಮಣಿ ಅಕಾಲಿ ದಳ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಅವರು ಮಂಗಳವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ , ಕೇಸರಿ ಪಕ್ಷವೇ "ನಿಜವಾದ ತುಕ್ಡೆ ತುಕ್ಡೆ ಗ್ಯಾಂಗ್" ಎಂದು ಕರೆದಿದ್ದಾರೆ.
ಪಂಜಾಬ್‌ನಲ್ಲಿ ಬಿಜೆಪಿ ಪಾಳಯವು ಸಿಖ್ಖರ ವಿರುದ್ಧ ಹಿಂದೂಗಳನ್ನು ಎತ್ತಿ ಕಟ್ಟುತ್ತಿದೆ ಎಂದು ಆರೋಪಿಸಿದ ಶಿರೋಮಣಿ ಅಕಾಲಿ ದಳದ ಅಧ್ಯಕ್ಷ, ಬಿಜೆಪಿ ಮೊದಲು ಮುಸ್ಲಿಮರ ವಿರುದ್ಧ ಹಿಂದೂಗಳನ್ನು ಎತ್ತಿಕಟ್ಟಿತು. ಈಗ ಶಾಂತಿ ಪ್ರಿಯ ಪಂಜಾಬಿ ಹಿಂದೂಗಳನ್ನು ನಮ್ಮ ಸಿಖ್ ಸಹೋದರರ ವಿರುದ್ಧ ಎತ್ತಿಕಟ್ಟಲು ಪ್ರಯತ್ನಿಸುತ್ತಿದೆ. ದೇಶಭಕ್ತ ಪಂಜಾಬ್ನ್ನು ಬಿಜೆಪಿ ಕೋಮು ದಳ್ಳುರಿಗೆ ತಳ್ಳಲು ಪ್ರಯತ್ನಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
PublicNext
16/12/2020 07:44 am