ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಳಿಗಾಲದ ಅಧಿವೇಶನ ರದ್ದು:ಕಾಂಗ್ರೆಸ್ ಕೆಂಡಾಮಂಡಲ

ನವದೆಹಲಿ: ವಿಪಕ್ಷಗಳು ಚಳಿಗಾಲ ಅಧಿವೇಶನಕ್ಕಾಗಿ ಕಾದು ಕೂತಿದ್ದವು. ಕೃಷಿ ಮಸೂದೆ ವಿರೋಧಿಸಿ ನಡೆಯುುತ್ತಿರುವ ಹೋರಾಟವನ್ನೇ ಅಸ್ತ್ರವಾಗಿಸಿಕೊಂಡ ಕೇಂದ್ರ ಸರ್ಕಾರವನ್ನು ಸಂಸತ್ತಿನಲ್ಲಿ ಹಣಿಯುವ ಪ್ರಯತ್ನಕ್ಕೆ ವಿರೋಧ ಪಕ್ಷಗಳು ಸಜ್ಜಾಗಿದ್ದವು. ಆದರೆ ಕೇಂದ್ರ ಸರ್ಕಾರ ಸಂಸತ್ತಿನ ಚಳಿಗಾಲದ ಅಧಿವೇಶನವನ್ನೇ ರದ್ದು ಮಾಡಿದೆ.

ಕೊರೋನಾ 2ನೇ ಅಲೆ ಎದ್ದಿರುವ ಕಾರಣ ಈ ಬಾರಿಯ ಚಳಿಗಾಲದ ಅಧಿವೇಶನ ರದ್ದು ಮಾಡಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಸರ್ವಪಕ್ಷಗಳು ಕೊರೋನಾ ಕಾರಣ ಚಳಿಗಾಲದ ಅಧಿವೇಶನ ರದ್ದು ಮಾಡಲು ಒಪ್ಪಿಕೊಂಡಿದೆ. ಜನವರಿಯಲ್ಲಿ ಬಜೆಟ್ ಕಲಾಪ ನಡೆಯಲಿದೆ ಎಂದು ಜೋಶಿ ಹೇಳಿದ್ದಾರೆ.

ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಚರ್ಚಿಸಲು ಚಳಿಗಾಲದ ಅಧಿವೇಶನ ನಡೆಸಬೇಕು ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಕೇಂದ್ರಕ್ಕೆ ಪತ್ರ ಬರೆದಿದ್ದರು. ಈ ಕುರಿತು ಉತ್ತರಿಸಿದ ಜೋಶಿ, ಸದ್ಯ 2ನೇ ಕೊರೋನಾ ಅಲೆ ಇದೆ. ಹೀಗಾಗಿ ಕೊರೋನಾ ನಿಯಂತ್ರಣಕ್ಕಾಗಿ ಚಳಿಗಾಲದ ಅಧಿವೇಶನ ರದ್ದು ಮಾಡಬೇಕಾದ ಅನಿವಾರ್ಯತೆ ಇದೆ ಎಂದರು.

Edited By : Nagaraj Tulugeri
PublicNext

PublicNext

16/12/2020 11:50 am

Cinque Terre

81.68 K

Cinque Terre

4

ಸಂಬಂಧಿತ ಸುದ್ದಿ