ಚಿಕ್ಕಬಳ್ಳಾಪುರ: ಮಾಜಿ ಸಚಿವೆ ರೇಣುಕಾ ರಾಜೇಂದ್ರನ್ ಅವರು ನಿನ್ನೆ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು.
ರೇಣುಕಾ ಅವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಡಾ. ಕೆ ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಯ ಹಿರಿಯ ನಾಯಕಿ, ಮಾಜಿ ಸಚಿವೆ ರೇಣುಕಾ ಅವರ ನಿಧನದ ಸುದ್ದಿ ಆಘಾತ ಮೂಡಿಸಿದೆ. ದೇವರಾಜು ಅರಸು ಅವರ ಸಾಮಾಜಿಕ ನ್ಯಾಯ ಪರಿಕಲ್ಪನೆಯಿಂದ ರಾಜಕೀಯ ಪ್ರವೇಶಿಸಿದ ಶ್ರೀಮತಿ ರೇಣುಕಾ ರಾಜೇಂದ್ರನ್ ಅವರು ಮೂರು ಬಾರಿ ಶಾಸಕರಾಗಿ ಶ್ರೀ ಗುಂಡೂರಾವ್ ಅವರ ಸರ್ಕಾರದಲ್ಲಿ ಮಂತ್ರಿಗಳಾಗಿ ಸೇವೆ ಸಲ್ಲಿಸಿದ್ದರು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ
PublicNext
16/12/2020 02:10 pm