ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಗ್ರಾ.ಪಂ ಚುನಾವಣಾ ಪ್ರಚಾರಕ್ಕೆ ಹೋದ ಕರಂದ್ಲಾಜೆಗೆ ಗ್ರಾಮಸ್ಥರಿಂದ ತರಾಟೆ

ಚಿಕ್ಕಮಗಳೂರು: ಗ್ರಾಮ ಪಂಚಾಯತಿ ಚುನಾವಣಾ ಪ್ರಚಾರಕ್ಕೆ ಹೋದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ಮೂಡಿಗೆರೆ ತಾಲೂಕಿನ ಜಾಂಬಳೆ ಗ್ರಾಮದಲ್ಲಿ ನಡೆದಿದೆ.

ಜಾಂಬಳೆ ಗ್ರಾಮಸ್ಥರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಕ್ಲಾಸ್ ತೆಗೆದುಕೊಂಡು, ಹಲವು ವರ್ಷಗಳಿಂದ ಕುದುರೆಮುಖ, ಜಾಂಬಳೆ, ಕೆಂಕನಕೊಂಡ, ಬಿಳಗಲ್, ನೆಲ್ಲಿಬೀಡಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಗಳನ್ನು ಅನುಭವಿಸುತ್ತಿದ್ದೇವೆ. ಆದರೆ ಇದಕ್ಕೆ ಇಲ್ಲಿವರೆಗೆ ಯಾರೂ ಪರಿಹಾರವನ್ನು ನೀಡಿಲ್ಲ. ಆದಷ್ಟು ಬೇಗ ನಮಗೆ ಪರಿಹಾರ ನೀಡಬೇಕು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಬಿಜೆಪಿ ಮುಖಂಡರು ಹಾಗೂ ಗ್ರಾಮಸ್ಥರ ಮಧ್ಯೆ ಜಟಾಪಟಿ ನಡೆಯಿತು. ಅಷ್ಟೇ ಅಲ್ಲದೆ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರನ್ನು ಕೂಡ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು.

Edited By : Vijay Kumar
PublicNext

PublicNext

16/12/2020 04:05 pm

Cinque Terre

44.07 K

Cinque Terre

1

ಸಂಬಂಧಿತ ಸುದ್ದಿ