ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸೋಮಶೇಖರ್ ನಂಬರ್‌ 1 ಸಚಿವ: ಕಟೀಲ್ ಭರ್ಜರಿ ಬ್ಯಾಟಿಂಗ್

ಮೈಸೂರು: ಪಕ್ಷ ಹಾಗೂ ಸರ್ಕಾರ ನೀಡುವ ನಿರ್ದೇಶನಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಜಾರಿಗೊಳಿಸುವ ಸಚಿವರಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ನಂಬರ್‌ ಒನ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್‌ ಕಟೀಲ್ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಸಚಿವ ಸೋಮಶೇಖರ್ ಅವರು ಮೈಸೂರು ಜಿಲ್ಲೆಯ ಶಕ್ತಿ ಕೇಂದ್ರ, ಮಹಾಶಕ್ತಿ ಕೇಂದ್ರಗಳಿಗೆ ಹಾಗೂ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿದರು. ಈ ವೇಳೆ ಪಕ್ಷದ ಕಚೇರಿಗಳಿಗೆ ನಿಯಮಿತವಾಗಿ ಭೇಟಿ ಕೊಟ್ಟು, ಕಾರ್ಯಕರ್ತರ ಹಾಗೂ ಸಾರ್ವಜನಿಕರ ಕುಂದು ಕೊರತೆಗಳಿಗೆ ಸ್ಪಂದಿಸುವ ಕೆಲಸವನ್ನು ಅತ್ಯಂತ ಶಿಸ್ತುಬದ್ಧವಾಗಿ ಮಾಡುತ್ತಿದ್ದಾರೆ. ಈ ಭಾಗದಲ್ಲಿ ಬಿಜೆಪಿಗೆ ಒಳ್ಳೆಯ ತಂಡವಿದೆ. ಹಗಲು-ರಾತ್ರಿ ಕೆಲಸ ಮಾಡುವ ಉಸ್ತುವಾರಿ ಸಚಿವರಿದ್ದಾರೆ ಎಂದು ಹಾಡಿ ಹೊಗಳಿದರು.

Edited By : Vijay Kumar
PublicNext

PublicNext

16/12/2020 08:59 pm

Cinque Terre

34.55 K

Cinque Terre

2

ಸಂಬಂಧಿತ ಸುದ್ದಿ