ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೈತ ಹೋರಾಟದಲ್ಲಿ ಸಿಖ್ ಧರ್ಮ ಗುರು ಆತ್ಮಹತ್ಯೆ; ಡೆತ್‌ನೋಟ್‌ನಲ್ಲಿ ಸ್ಫೋಟಕ ಮಾಹಿತಿ!

ನವದೆಹಲಿ: ನೂತನ ಕೃಷಿ ಕಾನೂನು ವಿರೋಧಿಸಿ ದೆಹಲಿಯ ಗಡಿ ಭಾಗದಲ್ಲಿ ರೈತ ಹೋರಾಟದ ಕಿಚ್ಚು ಹೆಚ್ಚಾಗಿದೆ. ನಿನ್ನೆ (ಮಂಗಳವಾರ)ವಷ್ಟೇ ರೈತ ಪ್ರತಿಭಟನೆ ಸೇರಿಕೊಂಡ ಹರ್ಯಾಣ ಗುರುದ್ವಾರದ ಧರ್ಮಗುರು ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹರ್ಯಾಣ ಗುರುದ್ವಾರದ ಧರ್ಮಗುರು ಬಾಬಾ ರಾಮ್ ಸಿಂಗ್ (65) ಪ್ರತಿಭಟನಾ ಸ್ಥಳದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಕ್ಷಣವೇ ಪೊಲೀಸರು ಪಾಣಿಪತ್‌ನಲ್ಲಿರುವ ಪಾರ್ಕ್ ಆಸ್ಪತ್ರೆಗೆ ಅವರನ್ನು ಸಾಗಿಸಿದ್ದರು. ಆದರೆ ಅಷ್ಟರೊಳಗೆ ಧರ್ಮಗುರು ಸಾವನ್ನಪ್ಪಿದ್ದರು ಎಂದು ವೈದ್ಯರು ಖಚಿತಪಡಿಸಿದ್ದಾರೆ.

ರಾಮ್​ಸಿಂಗ್​ ದೇಹದ ಬಳಿಯೇ ಅವರು ಬರೆದಿಟ್ಟಿದ್ದ ಡೆತ್​ ನೋಟ್​ ಪತ್ತೆಯಾಗಿದೆ. “ರೈತರ ದುಸ್ಥಿತಿ ಮತ್ತು ಸರ್ಕಾರದ ದಬ್ಬಾಳಿಕೆಯಿಂದಾಗಿ ನಾನು ನೊಂದಿದ್ದೀನಿ. ರೈತರು ತಮ್ಮ ಹಕ್ಕುಗಳಿಗಾಗಿ ಬೀದಿಗೆ ಇಳಿದು ಹೋರಾಟ ಮಾಡುತ್ತಿದ್ದಾರೆ. ಇದಕ್ಕೆ ನಾನು ಕೂಡ ಸಾಕ್ಷಿಯಾಗಿದ್ದೇನೆ. ಅವರ ನೋವು ನನಗೆ ಅರ್ಥವಾಗುತ್ತೆ. ಅವರ ನೋವನ್ನು ನಾನು ಹಂಚಿಕೊಳ್ಳುತ್ತೇನೆ. ರೈತರು ನಿರಂತರ ಹೋರಾಟ ಮಾಡುತ್ತಿದ್ದರೂ, ಕೇಂದ್ರ ಸರ್ಕಾರ ನ್ಯಾಯ ಒದಗಿಸುತ್ತಿಲ್ಲ. ಇದು ದೊಡ್ಡ ಅಪರಾಧ. ನನ್ನ ಆತ್ಮಹತ್ಯೆ ಸರ್ಕಾರದ ದಬ್ಬಾಳಿಯೆ ವಿರುದ್ಧದ ಧ್ವನಿಯಾಗಿದೆ” ಎಂದು ಡೆತ್​ನೋಟ್​ನಲ್ಲಿ ಬರೆಯಲಾಗಿದೆ.

Edited By : Vijay Kumar
PublicNext

PublicNext

16/12/2020 09:32 pm

Cinque Terre

83.18 K

Cinque Terre

8

ಸಂಬಂಧಿತ ಸುದ್ದಿ