ಭೋಪಾಲ್: 2020ರ ಮಾರ್ಚ್‌ನಲ್ಲಿ ಮಧ್ಯ ಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಉರುಳಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಹೇಳಿದ್ದಾರೆ.
ಇಂದೋರ್‌ನಲ್ಲಿ ಪಕ್ಷದ ಕಿಸಾನ್ ಸಮ್ಮೇಳನ ಉದ್ದೇಶಿಸಿ ಬುಧವಾರ ಮಾತನಾಡಿದ ಅವರು, ಯಾರಿಗೂ ಹೇಳಬೇಡಿ, ನಾನು ಇದನ್ನು ಇಲ್ಲಿಯವರೆಗೆ ಯಾರಿಗೂ ಹೇಳಿಲ್ಲ. ಕಮಲ್ ನಾಥ್ ಸರ್ಕಾರವನ್ನು ಉರುಳಿಸುವಲ್ಲಿ ಯಾರಾದರೂ ಪ್ರಮುಖ ಪಾತ್ರ ವಹಿಸಿದರೆ, ಅದು ನರೇಂದ್ರ ಮೋದಿ ಮಾತ್ರ. ಧರ್ಮೇಂದ್ರ ಪ್ರಧಾನ್ ಅಲ್ಲ ಎಂದು ಬಹಿರಂಗಪಡಿಸಿದ್ದಾರೆ.
ಈ ವೇಳೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಮಧ್ಯ ಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಸಹ ವೇದಿಕೆಯಲ್ಲಿದ್ದರು. ವಿಜಯವರ್ಗಿಯಾ ಅವರ ರೋಚಕ ಹೇಳಿಕೆಯ ವಿಡಿಯೋವನ್ನು ಟ್ವೀಟ್ ಮಾಡಿರುವ ಮಧ್ಯ ಪ್ರದೇಶ ಕಾಂಗ್ರೆಸ್ ವಕ್ತಾರ ನರೇಂದ್ರ ಸಲೂಜಾ ಅವರು, "ಸಂವಿಧಾನಾತ್ಮಕವಾಗಿ ಚುನಾಯಿತವಾದ ಸರ್ಕಾರಗಳನ್ನು ಅಸಂವಿಧಾನಿಕ ರೀತಿಯಲ್ಲಿ ಕೆಳಗಿಳಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರ ಈಗ ಸ್ಪಷ್ಟವಾಗಿದೆ" ಎಂದು ದೂರಿದ್ದಾರೆ.
PublicNext
17/12/2020 08:10 am