ಧಾರವಾಡ: ಈ ಹಿಂದಿನ ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ಕೊಟ್ಟಿದ್ದು ಸಿದ್ದರಾಮಯ್ಯ ಅಲ್ಲ, ಬೆಂಬಲ ಕೊಟ್ಟಿದ್ದು ಕಾಂಗ್ರೆಸ್ ಹೈಕಮಾಂಡ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿರುಗೇಟು ನೀಡಿದ್ದಾರೆ.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬರುತ್ತೆ ಅಂತಾ ತರಾತುರಿಯಲ್ಲಿ ಕುಮಾರಸ್ವಾಮಿ ಅವರನ್ನು ಸಿಎಂ ಮಾಡಿದರು. 'ಹರಿಯೋ ನೀರಿಗೆ ದೊಣ್ಣೆ ನಾಯಕನ ಅಪ್ಪಣೆ ಬೇಕೆ?'. ಹಾಗಂತ ಸಿದ್ದರಾಮಯ್ಯನನ್ನು ಕಾಂಗ್ರೆಸ್ ಕೇಳಿಲ್ಲ. ಹೈಕಮಾಂಡ್ ಮಾಡಿದ್ದನ್ನು ತಮ್ಮ ಕ್ರೆಡಿಟ್ಗೆ ತೆಗೆದುಕೊಳ್ಳೋದು ಬೇಡ ಎಂದು ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು.
ಅವರ ಮಧ್ಯೆ ನಡೆದಿರುವ ಟ್ವೀಟ್ ವಾರ್ ಬಗ್ಗೆ ನಾನು ಹೆಚ್ಚು ಹೇಳಲಾರೆ. ಕಾಂಗ್ರೆಸ್ ಬೀಳುವುದರಲ್ಲಿ ಸಿದ್ದರಾಮಯ್ಯನವರ ಪಾತ್ರವೂ ಇದೆ ಅಂತಾ ಕುಮಾರಸ್ವಾಮಿ ಅವರೇ ಹೇಳಿದ್ದಾರೆ. ಅದಕ್ಕೆ ಸರ್ಮಥವಾದ ಉತ್ತರ ಕೊಡುವುದು ಸಿದ್ದರಾಮಯ್ಯ ಜವಾಬ್ದಾರಿಯಾಗಿದೆ ಎಂದರು.
PublicNext
18/12/2020 08:07 pm