ಧಾರವಾಡ: ನಮ್ಮ ತಂದೆ ಬಿ.ಎಸ್.ಯಡಿಯೂರಪ್ಪನವರು ಈ ರಾಜ್ಯದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸುತ್ತಾರೆ ಎಂದು ಯಡಿಯೂರಪ್ಪನವರ ಪುತ್ರಿ ಅರುಣಾದೇವಿ ವಿಶ್ವಾಸ ವ್ಯಕ್ತಪಡಿಸಿದರು.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ತಂದೆ ಎನ್ನುವ ಅಭಿಮಾನದಿಂದಷ್ಟೇ ಅಲ್ಲ, ಒಬ್ಬ ಸಾಮಾನ್ಯ ಮಹಿಳೆಯಾಗಿ ನಾನು ಈ ಮಾತು ಹೇಳುತ್ತಿದ್ದೇನೆ. ಅವರು ಸಿಎಂ ಆಗಿರುವುದು ನಮ್ಮೆಲ್ಲರ ಭಾಗ್ಯ. ಆ ಅದೃಷ್ಟ ಕೈಕೊಟ್ಟರೆ ಏನೂ ಮಾಡೋಕೆ ಆಗೋದಿಲ್ಲ ಎಂದರು.
ಅವರು ಸಿಎಂ ಆಗಿ ಮುಂದುವರೆಯುವುದಿಲ್ಲ ಎಂಬುದು ಕೇವಲ ವದಂತಿ. ಅವರು ಕೌನ್ಸಿಲರ್, ಶಾಸಕ ಇದ್ದಾಗಿನಿಂದಲೂ ಇಂತಹುದನ್ನೆಲ್ಲ ಎದುರಿಸಿಕೊಂಡು ಬಂದಿದ್ದಾರೆ. ಸಾಮಾನ್ಯ ಜನ ಪಕ್ಷಾತೀತವಾಗಿ ಯಡಿಯೂರಪ್ಪನವರನ್ನು ಬಹಳ ಪ್ರೀತಿಯಿಂದ ಕಾಣುತ್ತಾರೆ. ಅವರ ಮೇಲಿನ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪನವರು ಹಾಗೂ ವಿಜಯೇಂದ್ರ ಬೇಕಾದ ಉತ್ತರ ಕೊಟ್ಟಿದ್ದಾರೆ ಎಂದರು.
PublicNext
18/12/2020 09:00 pm