ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ : ರಾಹುಲ್ ಗಾಂಧಿಯೇ ಸೂಕ್ತ ವ್ಯಕ್ತಿ

ನವದೆಹಲಿ: ಕಾಂಗ್ರೆಸ್ ಗೆ ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸದ್ಯದಲ್ಲೇ ಆರಂಭವಾಗಲಿದ್ದು, ರಾಹುಲ್ ಗಾಂಧಿಯವರೇ ಅಧ್ಯಕ್ಷರಾಗಲೆಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್, ಪಕ್ಷವನ್ನು ಮುನ್ನಡೆಸಲು ರಾಹುಲ್ ಗಾಂಧಿ ಅವರೇ ಸೂಕ್ತ ವ್ಯಕ್ತಿ ಎಂದು ಅವರು ತಿಳಿಸಿದ್ದಾರೆ.

ಸೋನಿಯಾ ಗಾಂಧಿ ಹಾಗೂ 23 ಪ್ರಮುಖ ಮುಖಂಡರ ನಡುವೆ ಇಂದು (ಶನಿವಾರ) ನಡೆಯಲಿರುವ ಸಭೆಗೂ ಮುಂಚಿತವಾಗಿ ಇಂತಹದೊಂದು ಅಭಿಪ್ರಾಯ ವ್ಯಕ್ತವಾಗಿದೆ.

ಅವರೆಲ್ಲರು ಸಕ್ರಿಯ ನಾಯಕತ್ವವನ್ನು ಕೋರಿದ್ದು, ಗಾಂಧಿ ಯಾವಾಗಲೂ ಮಾರ್ಗದರ್ಶಕ ಶಕ್ತಿಯಾಗಿರುತ್ತಾರೆ ಎಂದು ಅಭಿಪ್ರಾಯಪಟ್ಟಿದೆ.

ಸೋನಿಯಾ ಗಾಂಧಿ ಭೇಟಿ ಮಾಡುವ ಕಾಂಗ್ರೆಸ್ ನಿಯೋಗದಲ್ಲಿ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್, ಮೇಲ್ಮನೆ ಪಕ್ಷದ ಉಪನಾಯಕ ಆನಂದ್ ಶರ್ಮಾ, ಮಾಜಿ ಸಚಿವ ಪಿ ಚಿದಂಬರಂ, ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್, ಭೂಪಿಂದರ್ ಹೂಡಾ, ಪೃಥ್ವಿರಾಜ್ ಚವಾಣ್ ಮತ್ತು ಶಶಿ ತರೂರ್ ಇರಲಿದ್ದಾರೆ.

ರಾಹುಲ್ ಗಾಂಧಿ ಕೂಡಾ ಸಭೆಯಲ್ಲಿ ಹಾಜರಾಗಲಿದ್ದಾರೆ ಎಂಬುದನ್ನು ಮೂಲಗಳು ಖಚಿತಪಡಿಸಿದೆ.

2019ರಲ್ಲಿ ಲೋಕಸಭೆ ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತಿದ್ದ ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪರಿಣಾಮ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಮುಂದುವರಿಯಬೇಕಾಯಿತು.

ಪಕ್ಷವನ್ನು ಮುನ್ನಡೆಸಲು ಹಾಗೂ ನರೇಂದ್ರ ಮೋದಿ ಸರಕಾರವನ್ನು ಎದುರಿಸಲು ರಾಹುಲ್ ಗಾಂಧಿ ಸೂಕ್ತ ವ್ಯಕ್ತಿ ಎಂಬುದು ನನ್ನ ನಂಬಿಕೆ ಮತ್ತು ಶೇಕಡಾ 99.9ರಷ್ಟು ನಾಯಕರು ಹಾಗೂ ಕಾರ್ಯಕರ್ತರ ನಂಬಿಕೆಯಾಗಿದೆ ಎಂದು ಸುರ್ಜೇವಾಲಾ ಹೇಳಿದರು.

Edited By : Nirmala Aralikatti
PublicNext

PublicNext

19/12/2020 08:57 am

Cinque Terre

82.85 K

Cinque Terre

18

ಸಂಬಂಧಿತ ಸುದ್ದಿ