ಬೆಂಗಳೂರು: ಒಂದೆಡೆ ಅನ್ನದಾತರು ಕೃಷಿ ಮಸೂದೆ ವಿರೋಧಿಸಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಇತ್ತ ರಾಜಕೀಯ ನಾಯಕರು ಪರಸ್ಪರ ಕೇಸರೆರಚಾಟ ನಡೆಸುತ್ತಿರುವುದು ನಿಜಕ್ಕೂ ಖೇಧಕರ ಸಂಗತಿ.
ಒಂದು ಸಂದರ್ಭದಲ್ಲಿ ಸಮ್ಮಿಶ್ರ ಸರ್ಕಾರ ನಡೆಸಲು ಜೀವಕ್ಕೆ ಜೀವ ಕೊಡುವ ಮಟ್ಟಿಗೆ ದೋಸ್ತಿಯಲ್ಲಿದ್ದವರು ಇಂದು ಪರಸ್ಪರ ಕಾಲೆಳೆದುಕೊಳ್ಳುತ್ತಿರುವುದು ನೋಡುಗರಿಗೆ ಬಿಟ್ಟಿ ಮನರಂಜನೆಯಾಗಿದೆ.
ಹೌದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ನಡುವಿನ ವಾಗ್ದಾಳಿಗಳು ಮುಂದುವರಿದಿವೆ.
ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಮಾತನಟಿದ ಮಾತುಗಳಿಗೆ ತೀರುಗೇಟು ನೀಡಿರುವ ಹೆಚ್ ಡಿಕೆ ಒಂದು ಪ್ರಾದೇಶಿಕ ಪಕ್ಷವನ್ನು ಕಟ್ಟಿ ಕೇವಲ 10 ಸ್ಥಾನ ಗೆದ್ದು ತೋರಿಸಲಿ ಎಂದು ಟಗರಿಗೆ ಓಪನ್ ಚಾಲೆಂಗ್ ಹಾಕಿದ್ದಾರೆ.
ಹೆಚ್ ಡಿಕೆ ಸರಣಿ ಟ್ವೀಟ್
ಸಿದ್ದರಾಮಯ್ಯ ಅವರ ಉಡಾಫೆ ಮಾತುಗಳಿಗೆ ಪ್ರತಿಕ್ರಿಯಿಸಬಾರದೆಂದು ಇಚ್ಚಿಸಿದ್ದೆ.
ಆದರೆ, ಚಾಮುಂಡೇಶ್ವರಿಯಲ್ಲಿನ ಭಾಷಣದಿಂದ ಹೊಮ್ಮಿರುವ ಅವರ ದ್ವಂದ್ವ ನಿಲುವಿನ ಬಗ್ಗೆ ಮಾತಾಡಬೇಕಿದೆ.
ಅಲ್ಲಿ ಅವರು ಏನಾದರೂ ಹೇಳಿರಲಿ. ಅದರೆ, ಒಳಒಪ್ಪಂದದ ಆರೋಪ, ಕುಮಾರಸ್ವಾಮಿಯನ್ನು ಸಿಎಂ ಆಗಲು ಬಿಡುತ್ತಿರಲಿಲ್ಲ ಎಂಬ ದ್ವಂದ್ವದ ಬಗ್ಗೆ ಮಾತಾಡುವೆ.
ಚಾಮುಂಡೇಶ್ವರಿಯಲ್ಲಿ ಜೆಡಿಎಸ್-ಬಿಜೆಪಿ ಒಳಒಪ್ಪಂದ ಮಾಡಿಕೊಂಡವು, ಅದರಲ್ಲಿ ಕಾಂಗ್ರೆಸ್ಸಿಗರೂ ಸೇರಿದರು, ಬಾದಾಮಿಯಲ್ಲಿ ಗೆಲ್ಲದೇ ಹೋಗಿದ್ದರೆ ಭವಿಷ್ಯ ಕತ್ತಲಾಗುತ್ತಿತ್ತು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಹಾಗೆ ಒಪ್ಪಂದವಾಗಿದ್ದರೆ, ಅದು ಬಾದಾಮಿಗೂ ಅನ್ವಯಿಸುತ್ತಿರಲಿಲ್ಲವೇ? ಬಾದಾಮಿಯಲ್ಲಿ ಅವರನ್ನು ಗೆಲ್ಲಲು ಬಿಡುತ್ತಿದ್ದೆವೆ? ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸರಣಿ ಟ್ವೀಟ್ ಗಳ ಮೂಲಕ ಚಾಟಿ ಬಿಸಿದ್ದಾರೆ.
2009-2010ರ 20 ಉಪಚುನಾವಣೆಗಳನ್ನು ಸಿದ್ದರಾಮಯ್ಯ ಒಮ್ಮೆ ಪರಾಮರ್ಶೆ ಮಾಡಲಿ.
ಆ ಹೊತ್ತಿನಲ್ಲಿ ತಮ್ಮನ್ನು ಕಾಂಗ್ರೆಸ್ ಕಡೆಗಣಿಸಿತ್ತು ಎಂಬ ಕಾರಣಕ್ಕೆ ಅವರು ಯಾರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎಂಬುದನ್ನು ಅವರ ಆತ್ಮ ನೆನಪಿಸುತ್ತದೆ.
ಅದರ ಪರಿಣಾಮವಾಗಿ ಕಾಂಗ್ರೆಸ್ ಎಷ್ಟು ಸ್ಥಾನ ಗೆದ್ದಿತ್ತು ಎಂಬುದನ್ನೂ ಮನದಟ್ಟು ಮಾಡಿಸುತ್ತದೆ ಎಂದು ಹೇಳಿದ್ದಾರೆ.
PublicNext
19/12/2020 12:55 pm