ಹಾವೇರಿ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಸಿಡಿದೆದ್ದಿದ್ದಾರೆ.
ಶಾಸಕ ರೇಣುಕಾಚಾರ್ಯ ಅವರ ಹೇಳಿಕೆಯನ್ನು ಖಂಡಿಸಿದ ಅವರು ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಮನೆ ನಿರ್ಮಿಸಿಕೊಡುತ್ತೇನೆ ಎಂದು ಕೋಡಿಹಳ್ಳಿಯವರು ಜನರಿಂದ ಹಣ ವಸೂಲಿ ಮಾಡಿ, ವಂಚಿಸಿದ್ದಾರೆ. ಅವರೊಬ್ಬ ನಕಲಿ ರೈತ ನಾಯಕ ಎಂದು ಸುಳ್ಳು ಆರೋಪವನ್ನು ರೇಣುಕಾಚಾರ್ಯ ಮಾಡಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು. ಸುಳ್ಳು ಹೇಳಿಕೆಗಳನ್ನು ವಾಪಸ್ ಪಡೆಯಬೇಕು ಮತ್ತು ಕೂಡಲೇ ಕೋಡಿಹಳ್ಳಿಯವರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
PublicNext
19/12/2020 07:07 pm