ಮಡಿಕೇರಿ: ನನ್ನ ಹೇಳಿಕೆಯಿಂದ ಕೊಡವ ಸಮುದಾಯಕ್ಕೆ ನೋವಾಗಿದ್ದರೆ ವಿಷಾದಿಸುತ್ತೇನೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ''ಕೊಡವರೂ ಬೀಪ್ ತಿನ್ನುತ್ತಾರೆ ಎಂಬ ನನ್ನ ಹೇಳಿಕೆ ತಪ್ಪುಗ್ರಹಿಕೆಯಿಂದ ಮಾಧ್ಯಮಗಳಲ್ಲಿ ವರದಿಯಾಗಿದೆ.
ಇದರಿಂದ ಕೊಡವ ಸಮುದಾಯಕ್ಕೆ ನೋವಾಗಿದ್ದರೆ ಈ ಬಗ್ಗೆ ನಾನು ವಿಷಾದಿಸುತ್ತೇನೆ. ನನ್ನ ನೆರೆಯ ಜಿಲ್ಲೆಯಾದ ಕೊಡಗಿನ ಸಂಸ್ಕೃತಿ ಬಗ್ಗೆ ನನಗೆ ಅರಿವಿದೆ, ವಿಶೇಷವಾದ ಗೌರವವೂ ಇದೆ'' ಎಂದು ತಿಳಿಸಿದ್ದಾರೆ.
ಸಿದ್ದರಾಮಯ್ಯ ಹೇಳಿದ್ದೇನು?: ಮೈಸೂರಿನಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮವೊಂದರಲ್ಲಿ ಗೋಹತ್ಯೆ ನಿಷೇದ ಕಾಯ್ದೆ ಬಗ್ಗೆ ಮಾತನಾಡುತ್ತಾ, ಬೀಫ್ ಅನ್ನು ಕೇವಲ ಮುಸ್ಲಿಮರು ಮಾತ್ರ ತಿನ್ನುತ್ತಾರಾ? ಕ್ರೈಸ್ತರು, ದಲಿತರು, ಕೊಡವರು ಕೂಡ ತಿನ್ನುತ್ತಾರೆ. ನನಗೆ ತಿನ್ನಬೇಕು ಅನಿಸಿದರೆ ಯಾವುದನ್ನು ಬೇಕಾದರೂ ತಿನ್ನುತ್ತೇನೆ ಎಂದು ಹೇಳಿದ್ದರು.
PublicNext
19/12/2020 10:55 pm