ತುಮಕೂರು: ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಜೊತೆ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದ್ದು ಸತ್ಯ ಎಂದು ಜೆಡಿಎಸ್ ಶಾಸಕ ಎಸ್ ಆರ್ ಶ್ರೀನಿವಾಸ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದು ಇಡೀ ದೇಶಕ್ಕೆ ಗೊತ್ತಿದೆ. ಸಿದ್ದರಾಮಯ್ಯ ಅವರಿಗೆ ಈಗ ಜ್ಞಾನೋದಯವಾದಂತಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಬೇಕೆಂದು ಬಿಜೆಪಿಗೆ ಬೆಂಬಲ ನೀಡಿದ್ದು ಅಕ್ಷರಶಃ ಸತ್ಯ. ಅದೊಂದೇ ಕ್ಷೇತ್ರವಲ್ಲ. ಉಳಿದ ಹಲವಾರು ಕ್ಷೇತ್ರಗಳಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಒಡಂಬಡಿಕೆ ಮಾಡಿಕೊಂಡು ಚುನಾವಣೆಗೆ ಹೋಗಿದ್ದೀವಿ. ಇದು ಎಲ್ಲರಿಗೂ ಗೊತ್ತಿರುವ ವಿಚಾರ. ಇದರಲ್ಲಿ ಹೊಸದೇನಿದೆ ಎಂದು ಶಾಸಕ ಎಸ್ ಆರ್ ಶ್ರೀನಿವಾಸ್ ಹೇಳಿದ್ದಾರೆ.
PublicNext
20/12/2020 09:05 am