ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅನುಭವ ಮಂಟಪ ನಿರ್ಮಾಣ: ರಾಜಕೀಯ ಗಿಮಿಕ್ ಎಂದ ಖಂಡ್ರೆ

ಬೆಂಗಳೂರು: ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣ ಯೋಜನೆಗೆ ಒಪ್ಪಿಗೆ ನೀಡಿ 15 ತಿಂಗಳುಗಳು ಕಳೆದ ಬಳಿಕ ರಾಜ್ಯ ಸರ್ಕಾರ ಇದೀಗ ಯೋಜನೆ ಕುರಿತು ವರದಿ ಸಿದ್ಧಪಡಿಸಲು ಗುತ್ತಿಗೆ ಕರೆದಿದೆ. ಆದರೆ, ರಾಜ್ಯ ಸರ್ಕಾರದ ಈ ನಡೆಯನ್ನು ಚುನಾವಣಾ ಗಿಮಿಕ್ ಎಂದು ಕಾಂಗ್ರೆಸ್ ಟೀಕಿಸಿದೆ.

ಈ ಹಿಂದೆ ನೂತನ ಸಂಸತ್ ಭವನಕ್ಕೆ ಶಂಕು ಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿಯವರು, ಬಸವಣ್ಣನವರ ಅನುಭವ ಮಂಟಪ ನೆನೆದು ಕನ್ನಡದಲ್ಲಿ ಮಾತನಾಡಿದ್ದರು.

ಕೆಪಿಸಿಸಿ ಕಾರ್ಯಕಾರಿ ಅಧ್ಯಕ್ಷ ಈಶ್ವರ್ ಖಂಡ್ರೆ ಮಾತನಾಡಿ, ಸಿದ್ದರಾಮಯ್ಯ ನಾಯಕತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ನಡೆಸುತ್ತಿದ್ದಾಗ ಅನುಭವ ಮಂಟಪ ನಿರ್ಮಾಣ ಚಿಂತನೆಗಳನ್ನು ನಡೆಸಲಾಗಿತ್ತು. ಇದೀಗ ಆಡಳಿತಾರೂಢ ಬಿಜೆಪಿ ಸರ್ಕಾರ 15 ತಿಂಗಳ ಬಳಿಕ ನಿರ್ಮಾಣ ಯೋಜನೆಗೆ ಒಪ್ಪಿಗೆ ನೀಡಿದೆ. ಇದನ್ನು ನಾವು ಸ್ವಾಗತಿಸುತ್ತೇವೆ. ಅನುಭವ ಮಂಟಪ ಅಂತರಾಷ್ಟ್ರೀಯ ಕೇಂದ್ರವಾಗಬೇಕು. ಬಸವಕಲ್ಯಾಣದಲ್ಲಿ ಉಪ ಚುನಾವಣೆ ಹತ್ತಿರಬರುತ್ತಿರುವುದರಿಂದ ಬಿಜೆಪಿ ಅನುಭವ ಮಂಟಪ ಕುರಿತು ಚುನಾವಣಾ ರಾಜಕೀಯ ಮಾಡುತ್ತಿದೆ. ಬಿಜೆಪಿಯ ನಿರ್ಧಾರಗಳೆಲ್ಲಾ ಗಿಮಿಕ್ ಅಷ್ಟೇ ಎಂದು ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

20/12/2020 03:06 pm

Cinque Terre

49.23 K

Cinque Terre

1