ನವದಹೆಲಿ: ಡಿಸೆಂಬರ್ 25ರಂದು ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ಹೇಳಿದೆ.
ಶನಿವಾರ ಪ್ರಕಟಣೆ ಬಿಡುಗಡೆ ಮಾಡಿರುವ ಬಿಜೆಪಿ ಪಕ್ಷವು, ಪೂರ್ವ ಸಿದ್ಧತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ. ಉತ್ತರ ಪ್ರದೇಶದಲ್ಲಿ 2,500ಕ್ಕೂ ಹೆಚ್ಚು ಸ್ಥಳಗಳಲ್ಲಿ 'ಕಿಸಾನ್ ಸಂವಾದ' ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದೆ.
ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರವು ಬಡವರು ಮತ್ತು ರೈತರಿಗೆ ಸಮರ್ಪಿತವಾಗಿದೆ ಎಂದು ಹೇಳಿದರು.ನೂತನ ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಸುಳ್ಳು ಹೇಳುತ್ತಿದೆ ಎಂದವರು ಆರೋಪಿಸಿದರು. ಅಲ್ಲದೆ ಮೋದಿ ಸರ್ಕಾರವು ಮಾಡಿರುವ ಕ್ಷೇಮಾಭಿವೃದ್ಧಿಯನ್ನು ಈ ಹಿಂದಿನವರು ಮಾಡಿದ್ದರೆ, ರೈತರ ಸ್ಥಿತಿ ಉತ್ತಮವಾಗಿರುತ್ತಿತ್ತು ಎಂದು ಬಿಜೆಪಿ ಹೇಳಿದೆ.
PublicNext
20/12/2020 03:36 pm