ನವದೆಹಲಿ: ಅಪ್ಪಟ ಕಾಂಗ್ರೆಸ್ಸಿಗ ಎಂದೇ ಜನಪ್ರಿಯರಾಗಿದ್ದ ಮಧ್ಯಪ್ರದೇಶದ ಮಾಜಿ ಸಿಎಂ ಮೋತಿಲಾಲ್ ವೋರಾ (93) ಅವರು ನಿಧನರಾಗಿದ್ದಾರೆ.
ಕೆಲವು ದಿನಗಳ ಹಿಂದೆ ಮೂತ್ರ ಸೋಂಕಿನಿಂದ ಬಳಲುತ್ತಿದ್ದ ಮೋತಿಲಾಲ್ ಮೋರಾ ಅವರನ್ನು ದೆಹಲಿಯ ಫೋರ್ಟಿಸ್ ಎಸ್ಕೋರ್ಟ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಷ್ಟೇ ಅಲ್ಲದೆ ಅವರಿಗೆ ಶ್ವಾಸಕೋಶದ ಸೋಂಕು ಕೂಡ ಇತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರು ಮೃತಪಟ್ಟಿದ್ದಾರೆ.
PublicNext
21/12/2020 04:22 pm