ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಿಜೆಪಿ- ಜೆಡಿಎಸ್ ವಿಲೀನದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸಿಎಂ ಯಡಿಯೂರಪ್ಪ ಹಾಗೂ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಮಧ್ಯೆ ಕೃಷಿ ಸಚಿವ ಬಿ.ಸಿ. ಪಾಟೀಲ್ ''ಸದ್ಯ ಯಾವುದೇ ಚುನಾವಣೆ ಇಲ್ಲ. ಹೀಗಾಗಿ ಜೆಡಿಎಸ್ ಜೊತೆ ಹೊಂದಾಣಿಕೆ ಅವಶ್ಯಕತೆಯೇ ಇಲ್ಲ'' ಎಂದು ಹೇಳಿದ್ದಾರೆ.
ಸಿಎಂ ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಸುಭದ್ರವಾಗಿದೆ. ನಮಗೆ ಯಾರ ಬೆಂಬವೂ ಅಗತ್ಯವಿಲ್ಲ. ಅಸಲಿಗೆ ಇದೊಂದು ಗಿಮಿಕ್ ನಡೆಯುತ್ತಿದೆ. ಜೆಡಿಎಸ್‌ನವರೇ ಗಿಮಿಕ್ ಮಾಡುತ್ತಿದ್ದಾರೆ. ಯಾವ ಕಾರಣಕ್ಕಾಗಿ ಈ ಗಿಮಿಕ್ ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಅದನ್ನ ನನ್ನ ಬಾಯಿಂದ ಯಾಕೆ ಹೇಳಿಸ್ತೀರಾ ಎಂದು ಕಿಡಿಕಾರಿದರು.
PublicNext
21/12/2020 04:50 pm