ಬೆಂಗಳೂರು: ಸಿಎಂ ಯಡಿಯೂರಪ್ಪ ಅವರ ಸಂಪುಟದಲ್ಲಿ ಸಚಿವ ಆಕಾಂಕ್ಷಿಗಳಿಗೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಹೊಸ ವರ್ಷದ ಆರಂಭದಲ್ಲಿ ಸಂಪುಟ ವಿಸ್ತರಣೆಯಾಗುವ ಸುಳಿವನ್ನು ಅರುಣ್ ಸಿಂಗ್ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆಯಲ್ಲಿ ಸಿಎಂ ಯಡಿಯೂರಪ್ಪ ಅವರಿಗೆ ಸಂಪೂರ್ಣ ಅಧಿಕಾರ ನೀಡಲಾಗುವುದು. ಸಚಿವಾಕಾಂಕ್ಷಿಗಳಿಗೆ ಸದ್ಯದಲ್ಲೇ ಸಿಹಿ ಸುದ್ದಿ ಸಿಗಲಿದೆ ಎಂದು ಹೇಳಿದ್ದಾರೆ.
ಬಿಎಸ್ ಯಡಿಯೂರಪ್ಪ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
PublicNext
21/12/2020 06:44 pm