ಕೋಲ್ಕತಾ: ಬಂಗಾಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸುಳ್ಳು ಹೇಳುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ರಾಜ್ಯದ ಸ್ಥಾನ-ಮಾನದ ಕುರಿತುಅಮಿತ್ ಶಾ ನೀಡಿದ ಅಂಕಿ-ಅಂಶ ಸುಳ್ಳಿನ ಕಸ ಎಂದು ತಿರುಗೇಟು ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, "ನಾನು ಅಮಿತ್-ಜಿ ಅವರಿಗೆ ಹೇಳಲು ಬಯಸುತ್ತೇನೆ. ನೀವು ಕೇಂದ್ರ ಗೃಹ ಸಚಿವರು. ನಿಮ್ಮ ಪಕ್ಷದ ಕಾರ್ಯಕರ್ತರು ಒದಗಿಸಿದ ಸುಳ್ಳನ್ನು ಪರಿಶೀಲಿಸದೆ ಬಹಿರಂಗವಾಗಿ ಹೇಳುವುದು ಸರಿಯಲ್ಲ" ಎಂದಿದ್ದಾರೆ.
PublicNext
21/12/2020 08:19 pm