ಹಾಸನ: ನಾವೇನು ಅಂತ 2023ರ ಚುನಾವಣೆಯಲ್ಲಿ ತೋರಿಸ್ತೀವಿ. ಜೆಡಿಎಸ್ ಪಕ್ಷ ಯಾವುದಕ್ಕೂ ಹೆದರಲ್ಲ. ನಮ್ಮ ಕಾರ್ಯಕರ್ತರು ಇನ್ನೂ ರಾಜ್ಯದಲ್ಲಿದ್ದಾರೆ. ದ್ವೇಷ ರಾಜಕಾರಣ ಮಾಡುತ್ತಿರುವ ಬಿಜೆಪಿಗೆ ಮುಂದಿನ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸುತ್ತಾರೆ ಅಂತಾ ಮಾಜಿ ಸಚಿವ ಎಚ್ ಡಿ ರೇವಣ್ಣ ಹೇಳಿದ್ದಾರೆ.
ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಯಾವ ಕಾರಣಕ್ಕೂ ಜೆಡಿಎಸ್ ಪಕ್ಷ ಬಿಜೆಪಿಯೊಂದಿಗೆ ವಿಲೀನವಾಗುವ ಪ್ರಶ್ನೆಯೇ ಇಲ್ಲ. ದೇವೇಗೌಡರು ಬದುಕಿರುವವರೆಗೂ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಇಲ್ಲ. ರಾಷ್ಟ್ರೀಯ ಹೀಗೆ ಹೇಳಿಕೆ ಕೊಡುವುದು ಅವರಿಗೆ ಶೋಭೆ ತರುವಂತದ್ದಲ್ಲ. ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವನ್ನು ಮುಗಿಸಬೇಕೆಂದು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಅಪಪ್ರಚಾರ ಮಾಡುತ್ತಿವೆ.
ಜನವರಿ ನಂತರ ನಮ್ಮ ಪಕ್ಷ ಎಂದರೇನೆಂದು ತೋರಿಸುತ್ತೇವೆ. ಕುಮಾರಸ್ವಾಮಿ ಮತ್ತು ದೇವೇಗೌಡರ ಜೊತೆ ಮಾತನಾಡಿದ್ದೇನೆ. ಯಾವುದೇ ಸರ್ಕಾರ ಬಂದರೂ ದೇವೇಗೌಡರ ಕುಟುಂಬಕ್ಕೆ ಕಿರುಕುಳ ಕೊಡೋದೇನೂ ಹೊಸತಲ್ಲ. ಆದ್ರೆ ನಾವು ಸುಮ್ನೆ ಯಾಕೆ ಸರ್ಕಾರಕ್ಕೆ ತೊಂದರೆ ಕೊಡಬೇಕೆಂದು ಸುಮ್ಮನಿದ್ದೇವೆ. ಮುಂದಿನ ಚುನಾವಣೆಯಲ್ಲಿ ನಾವೇನು ಅಂತಾ ತೋರಿಸುತ್ತೇವೆ ಎಂದು ರೇವಣ್ಣ ಹೇಳಿದರು.
PublicNext
21/12/2020 10:03 pm