ಬೆಂಗಳೂರು : ಡೆಡ್ಲಿ ಸೋಂಕು ಚುನಾವಣೆ ಹಾವಳಿಯ ನಡುವೆಯೂ ಚುನಾವಣೆ ಎದುರಾಗಿದ್ದು ಸಕಲ ಸಿದ್ದತೆಯ ನಡುವೆ ಮೊದಲ ಹಂತದ ಗ್ರಾ.ಪಂ.ಚುನಾವಣೆ ಮತದಾನ ಆರಂಭವಾಗಿದೆ.
ರಾಜ್ಯದಲ್ಲಿ 2 ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಲಾಗಿದ್ದು ಇಂದು ಡಿ.22 ಮೊದಲ ಹಂತದ ಚುನಾವಣೆಗೆ ಮತದಾನ ಆರಂಭವಾಗಿದೆ..
ಕೋವಿಡ್ ಹಿನ್ನೆಲೆಯಲ್ಲಿ ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಬದಲು ಬ್ಯಾಲೆಟ್ ಪೇಪರ್ ಬಳಕೆ ಮಾಡಲಾಗುತ್ತಿದೆ.
ಕರ್ನಾಟಕದ 117 ತಾಲೂಕುಗಳ 3019 ಗ್ರಾಮ ಪಂಚಾಯಿತಿಗಳ 43,238 ಸ್ಥಾನಗಳಿಗೆ ಬೆಳಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ ಬಿರುಸಿನ ಮತದಾನ ನಡೆಯಲಿದೆ.
ಇನ್ನು ಕೋವಿಡ್ ಸೋಂಕು ಹೊಂದಿರುವ ವ್ಯಕ್ತಿಗಳು ಸಹ ಮತ ಚಲಾವಣೆ ಮಾಡಲು ಅವಕಾಶ ನೀಡಲಾಗಿದೆ. ಕೊನೆಯ ಒಂದು ಗಂಟೆಗಳ ಕಾಲಾವಧಿಯಲ್ಲಿ ಅವರು ಕೂಡಾ ತಮ್ಮ ಹಕ್ಕು ಚಲಾಯಿಸಬಹುದಾಗಿದೆ.
ಮೊದಲ ಹಂತದಲ್ಲಿ 48,048 ಸ್ಥಾನಗಳಿಗೆ ಮತದಾನ ನಡೆಯಬೇಕಿತ್ತು. ಆದರೆ, 4,377 ಸ್ಥಾನಗಳಿಗೆ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಾಗಾಗಿ 43,238 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 1,17,383 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
PublicNext
22/12/2020 07:20 am