ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅವ್ರು ರೈತರಲ್ಲ, ಅರ್ಬನ್ ನಕ್ಸಲರು: ಕರಂದ್ಲಾಜೆ

ಕಾರ್ಕಳ: ಹರಿಯಾಣ ಮತ್ತು ಪಂಜಾಬಿನ ರೈತರು ದೆಹಲಿಯಲ್ಲಿ ಕೃಷಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಆದರೆ ಅವರೆಲ್ಲ ನಿಜವಾದ ರೈತರಲ್ಲ, ಅರ್ಬನ್ ನಕ್ಸಲರು ಎಂದು ಸಂಸದೆ ಶೋಭಾ ಕರಂದ್ಲಾಜೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕಾರ್ಕಳದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರದ ಪೌರತ್ವ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದ ‘ತುಕುಡೇ ಗ್ಯಾಂಗ್’ ಇಂದು ಕೇಂದ್ರದ ಕೃಷಿ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದೆ. ರಾಜ್ಯದಲ್ಲಿ ಕೂಡ ಕೋಡಿಹಳ್ಳಿ ಚಂದ್ರಶೇಖರ ನೇತೃತ್ವದಲ್ಲಿ ಅಧಿವೇಶನ ಸಂದರ್ಭ ಹೋರಾಟ ನಡೆಸಿದ್ದರು. ಕೋಡಿಹಳ್ಳಿ ನೇತೃತ್ವದ ರೈತ ಹೋರಾಟ ರಾಜಕೀಯ ಪ್ರೇರಿತ. ಕಾಂಗ್ರೆಸ್ ನಾಯಕರಾದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಇವರೆಲ್ಲ ಸೇರಿ ಸರ್ಕಾರದ ವಿರುದ್ಧ ನಡೆಸಿದ ಪಿತೂರಿ ಎಂದು ವಾಗ್ದಾಳಿ ನಡೆಸಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ವಿ.ಸುನೀಲ್ ಕುಮಾರ್, ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ಪುರಸಭೆ ಅಧ್ಯಕ್ಷೆ ಸುಮಾಕೇಶವ್, ಉಪಾಧ್ಯಕ್ಷೆ ಪಲ್ಲವಿ, ಅನಂತಕೃಷ್ಣ ಶೆಣೈ ಮತ್ತಿತರರು ಉಪಸ್ಥಿತರಿದ್ದರು.

Edited By : Vijay Kumar
PublicNext

PublicNext

22/12/2020 01:21 pm

Cinque Terre

108.61 K

Cinque Terre

13

ಸಂಬಂಧಿತ ಸುದ್ದಿ