ರಾಮನಗರ: ಜೆಡಿಎಸ್ ಪಕ್ಷದವರು ದಡ್ಡರಲ್ಲ. ಜೆಡಿಎಸ್ ಪಕ್ಷದ ಮುಖಂಡರಿಗೆ ಅವರದ್ದೇ ಆದ ಅನುಭವ ಇದೆ. ಪಕ್ಷ ವಿಲೀನದ ವಿಚಾರವಾಗಿ ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ಹೇಳಿಕೆಗೆ ತಲೆಕೆಡಿಸಿಕೊಂಡಿಲ್ಲ. ಪಕ್ಷ ಅವರದು ಅವರು ಏನಾದ್ರೂ ನಿರ್ಧಾರ ಕೈಗೊಳ್ಳಲಿ. ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬಿಜೆಪಿ-ಜೆಡಿಎಸ್ ವಿಲೀನ ವಿಚಾರಕ್ಕೆ ಸಂಬಂಧಿಸಿದಂತೆ ಕನಕಪುರದಲ್ಲಿ ಪ್ರತಿಕ್ರಿಯೆ ನೀಡಿದ ಅವರು ರಾಜಕೀಯದಲ್ಲಿ ಯಾವುದೂ ಶಾಶ್ವತ ಅಲ್ಲ. ಇಲ್ಲಿ ಏನು ಬೇಕಾದರೂ ಆಗಬಹುದು. ದೇಶದಲ್ಲೇ ಭಿನ್ನ ರೀತಿಯ ರಾಜಕಾರಣ ನಡೆಯುತ್ತಿದೆ. ಬಿಹಾರದಲ್ಲಿ ಏನೂ ಬೇಕಾದರೂ ಆಗಬಹುದು ಎಂಬ ಸ್ಥಿತಿ ಇದೆ ಎನ್ನುವ ಮೂಲಕ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ.
ಇನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿನ ಸೋಲಿನ ಕುರಿತಾಗಿ ಪ್ರತಿಕ್ರಿಯೆ ನೀಡಿದ ಡಿಕೆಶಿ, ಸಿದ್ದರಾಮಯ್ಯ ವಿರುದ್ಧ ಹೈ ಕಮಾಂಡ್‌ಗೆ ಯಾರೂ ದೂರು ನೀಡಿಲ್ಲ. ಅವರ ಕ್ಷೇತ್ರದ ಸೋಲಿನ ವಿಚಾರದಲ್ಲಿ ಅವರು ಹೇಳಿಕೆ ನೀಡಿದ್ದಾರೆ. ಸ್ಥಳೀಯ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದ್ದಾರೆ ಎಂದರು.
PublicNext
22/12/2020 05:37 pm