ಬೆಂಗಳೂರು: ಹೊಸ ಅಲೆಯ ಕೊರೊನಾ ವೈರಸ್ ರಾಜ್ಯಕ್ಕೆ ಕಾಲಿಟ್ಟಿದ್ದು, ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೆ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮುಂಜಾಗರೂಕತಾ ದೃಷ್ಟಿಯಿಂದ ನೈಟ್ ಕರ್ಫ್ಯೂ ವಿಧಿಸುವ ಬಗ್ಗೆ ಮುನ್ಸೂಚನೆಯನ್ನು ಆರೋಗ್ಯ ಸಚಿವ ಡಾ.ಸುಧಾಕರ್ ನೀಡಿದ್ದಾರೆ.
ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರಕ್ಕೆ ಜನರ ಆರೋಗ್ಯ ಮುಖ್ಯ. ಅವರ ರಕ್ಷಣೆಗಾಗಿ ನೈಟ್ ಕರ್ಪ್ಯೂ ಜಾರಿಗೆ ತರುವ ಬಗ್ಗೆ ಸಿಎಂ ಜೊತೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ. ಕೇಂದ್ರ ಆರೋಗ್ಯ ಸಚಿವಾಲಯ ನೈಟ್ ಕರ್ಪ್ಯೂ ವಿಧಿಸುವ ಅಧಿಕಾರವನ್ನು ರಾಜ್ಯಗಳಿಗೆ ನೀಡಿದೆ. ಮಹಾರಾಷ್ಟ್ರ ಈಗಾಗಲೇ ಜಾರಿ ಮಾಡಿದೆ ಎಂದರು
ರಾಜ್ಯದಲ್ಲಿ ಕೊರೊನಾ ಎರಡನೆ ಅಲೆ ಶುರುವಾಗುವ ಭೀತಿ ಇದೆ. ಹೀಗಾಗಿ ಜನವರಿ ಹೊತ್ತಿಗೆ ಶಾಲೆ ಆರಂಭಿಸಬೇಕೋ ಬೇಡವೋ ಎಂಬ ಬಗ್ಗೆ ತಾಂತ್ರಿಕ ಸಲಹಾ ಸಮಿತಿಯಿಂದ ಸಲಹೆ ಕೇಳಿದ್ದೇವೆ ಎಂದು ಇದೇ ವೇಳೆ ಸಚಿವ ಸುಧಾಕರ್ ಹೇಳಿದ್ರು.
PublicNext
22/12/2020 06:12 pm