ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವೇ ಇಲ್ಲ: ಕಾರಜೋಳ

ಧಾರವಾಡ: ವಿಧಾನ ಪರಿಷತ್ ಸಭಾಪತಿ ಪಕ್ಷಪಾತ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಸಭಾಪತಿ ಮೇಲೆ ಅವಿಶ್ವಾಸ ನಿರ್ಣಯ ಮಾಡಿದ್ದರು. ಆ ವಿಷಯದಲ್ಲಿ ಮಾತ್ರ ಬಿಜೆಪಿ, ಜೆಡಿಎಸ್ ಒಂದಾಗಿದ್ದವು.

ಅದನ್ನು ಹೊರತುಪಡಿಸಿ ಇನ್ನುಳಿದ ಯಾವುದೇ ವಿಷಯದಲ್ಲಿ ಜೆಡಿಎಸ್ ನೊಂದಿಗೆ ನಾವು ಮೈತ್ರಿ ಮಾಡಿಕೊಂಡಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಖಾತೆ ಸಚಿವ ಗೋವಿಂದ ಕಾರಜೋಳ ಹೇಳಿದರು.ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಮೇಲೆ ನಮಗೆ ಸಾಫ್ಟ್ ಕಾರ್ನರ್ ಇಲ್ಲ.

ನಾವು ಒಳ್ಳೆಯ ಕೆಲಸ ಮಾಡಿದಾಗ ಅವರು ಹೊಗಳುತ್ತಾರೆ. ಈ ಹಿಂದೆ ಜೆಡಿಎಸ್ ಕಾಂಗ್ರೆಸ್ ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿತ್ತು. ಆ ದೋಸ್ತಿ ಕೆಟ್ಟಾಗ ಕಾಂಗ್ರೆಸ್ ಬಗ್ಗೆ ಜೆಡಿಎಸ್ ನವರಿಗೆ ಗೊತ್ತಾಯಿತು ಎಂದರು.

ಸಿಎಂ ಯಡಿಯೂರಪ್ಪನವರ ಬದಲಾವಣೆ ಮಾತೇ ಇಲ್ಲ. ಅವರೊಬ್ಬ ಪ್ರಶ್ನಾತೀತ ನಾಯಕ. ಅವಧಿ ಮುಗಿಯವವರೆಗೂ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದರು.

ವಿಜಯಪುರದಲ್ಲಿ ಶೀಘ್ರವೇ ವಿಮಾನ ನಿಲ್ದಾಣ ಕಾಮಗಾರಿ ಆರಂಭವಾಗಲಿದೆ. ಗ್ರಾಪಂ ಚುನಾವಣೆ ನೀತಿ ಸಂಹಿತೆ ಇರುವುದರಿಂದ ಭೂಮಿ ಪೂಜೆ ನಡೆದಿಲ್ಲ. ನೀತಿ ಸಂಹಿತೆ ಮುಗಿದ ಮೇಲೆ ಭೂಮಿ ಪೂಜೆ ನೆರವೇರಿಸಲಾಗುವುದು. 220 ಕೋಟಿ ವೆಚ್ಚದಲ್ಲಿ ವಿಜಯಪುರದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲಿದ್ದೇವೆ ಎಂದು ಅವರು ತಿಳಿಸಿದರು.

Edited By :
PublicNext

PublicNext

22/12/2020 07:45 pm

Cinque Terre

123.68 K

Cinque Terre

2

ಸಂಬಂಧಿತ ಸುದ್ದಿ