ಶ್ರೀನಗರ : ಪ್ರತ್ಯೇಕ ಸ್ಥಾನಮಾನ ರದ್ದಾದ ಬಳಿಕ ಜಮ್ಮು ಕಾಶ್ಮೀರದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಮಂಡಳಿ(ಡಿಡಿಸಿ) ಚುನಾವಣೆಯಲ್ಲಿ ಫಾರೂಕ್ ಅಬ್ದುಲ್ಲಾ ನೇತೃತ್ವದ ಗುಪ್ಕಾರ್ ಮೈತ್ರಿ ಕೂಟ ಮೇಲುಗೈ ಸಾಧಿಸಿದೆ.
ವಿಶೇಷ ಅಂದ್ರೆ ಇದೇ ಮೊದಲ ಬಾರಿಗೆ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಒಟ್ಟು 280 ಜಿಲ್ಲಾ ಅಭಿವೃದ್ಧಿ ಮಂಡಳಿಗಳಿಗೆ ನಡೆದ ಚುನಾವಣೆಯಲ್ಲಿ ರಾತ್ರಿ ಪ್ರಕಟವಾದ ಫಲಿತಾಂಶದ ಪ್ರಕಾರ ಗುಪ್ಕಾರ್ ಕೂಟ 114 ಸ್ಥಾನ ಗೆದ್ದಿದೆ.
ಬಿಜೆಪಿ 71 ಸ್ಥಾನಗಳನ್ನು ಗೆದ್ದುಕೊಂಡಿದೆ. ಕಾಂಗ್ರೆಸ್ 24 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಇತರರು 60ಕ್ಕೂ ಹೆಚ್ಚು ಸ್ಥಾನ ಪಡೆದುಕೊಂಡಿದ್ದಾರೆ.
ಹೈದರಾಬಾದ್ ಪಾಲಿಕೆ ಚುನಾವಣೆ, ರಾಜಸ್ಥಾನ ಮತ್ತು ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಬಳಿಕ ಕಾಶ್ಮೀರ ಕಣಿವೆಯಲ್ಲೂ ಬಿಜೆಪಿ ಉತ್ತಮ ಸಾಧನೆ ಮಾಡಿದಂತಾಗಿದೆ.
ನ್ಯಾಷನಲ್ ಕಾನ್ಫರೆನ್ಸ್, ಪೀಪಲ್ಸ್ ಡೆಮೋಕ್ರಟಿಕ್ ಪಾರ್ಟಿ, ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಎಂ) ಸೇರಿದಂತೆ 7 ಪಕ್ಷಗಳು ಗುಪ್ಕಾರ್ ಮೈತ್ರಿಕೂಟವನ್ನು ರಚಿಸಿ ಚುನಾವಣೆ ಎದುರಿಸಿತ್ತು.
280 ಸ್ಥಾನಗಳಿಗೆ ಒಟ್ಟು 2,181 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ನವೆಂಬರ್ 28 ರಿಂದ ಡಿಸೆಂಬರ್ 19ರವರೆಗೆ ಒಟ್ಟು 8 ಹಂತಗಳಲ್ಲಿ ಚುನಾವಣೆ ನಡೆದಿತ್ತು.
PublicNext
23/12/2020 07:33 am