ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇಶದ ಜನರಿಗೆ ಕೊರೊನಾ ಲಸಿಕೆ ಯಾವಾಗ ಸಿಗುತ್ತೆ?: ರಾಹುಲ್ ಪ್ರಶ್ನೆ

ಹೊಸದಿಲ್ಲಿ: ಭಾರತದಲ್ಲಿ ಶೀಘ್ರದಲ್ಲೇ ಕೊರೊನಾ ವೈರಸ್ ಲಸಿಕೆಯ ಸಾರ್ವತ್ರಿಕ ಬಳಕೆಗೆ ಕೇಂದ್ರ ಸರ್ಕಾರ ಯೋಜನೆ ರೆಡಿ ಮಾಡಿಟ್ಟುಕೊಂಡಿದೆ. ಜನವರಿ ತಿಂಗಳಲ್ಲಿ ಕೊರೊನಾ ಲಸಿಕೆ ಹಂತ ಹಂತವಾಗಿ ಲಭ್ಯವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ.

ಈ ನಡುವೆ ಭಾರತದಲ್ಲಿ ಕೊರೊನಾ ವೈರಸ್ ಲಸಿಕೆ ಲಭ್ಯತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.

ದೇಶವಾಸಿಗಳಿಗೆ ಕೊರೊನಾ ಲಸಿಕೆ ಯಾವಾಗ ದೊರೆಯಲಿದೆ ಎಂಬುದನ್ನು ಹೇಳಬೇಕೆಂದು ಮೋದಿ ಅವರನ್ನು ಒತ್ತಾಯಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಚೀನಾ, ಅಮೆರಿಕ, ಇಂಗ್ಲೆಂಡ್ ಹಾಗೂ ರಷ್ಯಾ ದೇಶಗಳಲ್ಲಿ ಈಗಾಗಲೇ ಕೊರೊನಾ ಲಸಿಕೆಯ ಸಾರ್ವತ್ರಿಕ ಬಳಕೆ ಆರಂಭವಾಗಿದೆ. ಈಗಾಗಲೇ ಜಗತ್ತಿನಿದಾದ್ಯಂತ 23 ಲಕ್ಷ ಜನ ಕೊರೊನಾ ಲಸಿಕೆಯನ್ನು ಸ್ವೀಕರಿಸಿದ್ದಾರೆ ಎಂದು ಅಂಕಿ-ಸಂಖ್ಯೆಗಳ ಸಮೇತ ಮಾಹಿತಿ ನೀಡಿದ್ದಾರೆ.

Edited By : Nagaraj Tulugeri
PublicNext

PublicNext

23/12/2020 02:12 pm

Cinque Terre

109.02 K

Cinque Terre

17

ಸಂಬಂಧಿತ ಸುದ್ದಿ