ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜಮ್ಮು- ಕಾಶ್ಮೀರದಲ್ಲಿ ಪುನಃ ಪ್ರಜಾಪ್ರಭುತ್ವ ತರುವುದೇ ನಮ್ಮ ಗುರಿ: ಶಾ

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಅಭಿವೃದ್ಧಿ ಮಂಡಳಿಯ ಚುನಾವಣೆಲ್ಲಿ ಗೆದ್ದ ಬಿಜೆಪಿ ಖುಷಿಯಲ್ಲಿದೆ. ಇದೇ ಹಿನ್ನಲೆಯಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಶ್ಮೀರದಲ್ಲಿ ಪ್ರಜಾಪ್ರಭುತ್ವವನ್ನು ಪುನಃ ಸ್ಥಾಪಿಸಲು ಮೋದಿ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಹೇಳಿದ್ದಾರೆ.

ಚೊಚ್ಚಲ ಡಿಡಿಸಿ ಚುನಾವಣೆಯಲ್ಲಿ ಬಿಜೆಪಿಯನ್ನು ಏಕೈಕ ಅತಿದೊಡ್ಡ ಪಕ್ಷವೆಂದು ಮತ ಚಲಾಯಿಸಿದ್ದಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಜನರನ್ನು ಶ್ಲಾಘಿಸಿ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

“ಜಮ್ಮು ಮತ್ತು ಕಾಶ್ಮೀರದಲ್ಲಿ ತಳಮಟ್ಟದ ಪ್ರಜಾಪ್ರಭುತ್ವವನ್ನು ಪುನಃ ಸ್ಥಾಪಿಸಲು ಮೋದಿ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ನಡೆದ ಡಿಡಿಸಿ ಚುನಾವಣೆಯಲ್ಲಿ ಬಿಜೆಪಿಗೆ ಜನ ಮತ ಚಲಾಯಿಸಿದ್ದಾರೆ. ಇದು ಬಿಜೆಪಿ ಹಾಗೂ ಪ್ರಜಾಪ್ರಭುತ್ವದ ಮೇಲಿನ ಅವರ ನಂಬಿಕೆಯನ್ನು ತೋರುತ್ತದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

Edited By : Nagaraj Tulugeri
PublicNext

PublicNext

24/12/2020 02:23 pm

Cinque Terre

55.29 K

Cinque Terre

8

ಸಂಬಂಧಿತ ಸುದ್ದಿ