ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಕ್ರಮ ಡಿನೋಟಿಫಿಕೇಶನ್ ಪ್ರಕರಣದ ರದ್ಧತಿಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ನಲ್ಲಿ ವಜಾಗೊಂಡಿದೆ. ಈ ಹಿನ್ನೆಲೆಯಲ್ಲಿ ಅವರು ತಕ್ಷಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಬೀದಿಗಿಳಿದು ಹೋರಾಟ ಮಾಡಲಿ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.
ವಿಧಾನಸೌಧದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ಬಿಎಸ್ ಯಡಿಯೂರಪ್ಪ ಅವರು ರಾಜೀನಾಮೆ ಕೊಟ್ಟು ಸುಪ್ರೀಂ ಕೋರ್ಟ್ ಗೆ ಹೋಗಿ ಕ್ಲೀನ್ ಚಿಟ್ ಪಡೆದು ಮತ್ತೆ ಮುಖ್ಯಮಂತ್ರಿ ಆಗಲಿ. ಇಲ್ಲದಿದ್ದರೆ ಪ್ರಧಾನಿ ನರೇಂದ್ರ ಮೋದಿ ಹೇಳಿದ “ನಾ ಖಾವುಂಗ ನಾ ಖಾನೆ ದೂಂಗಾ” ಎನ್ನುವುದಕ್ಕೆ ಅರ್ಥ ಎಲ್ಲಿದೆ. ಒಂದು ವೇಳೆ ಸಿಎಂ ಯಡಿಯೂರಪ್ಪ ಅವರು ರಾಜೀನಾಮೆ ಕೊಡದಿದ್ದರೆ ಪ್ರಧಾನಿ ಮೋದಿ ಅವರೇ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು.
PublicNext
24/12/2020 02:48 pm