ಕೋಲ್ಕತ : ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಕಣ ರಂಗೇರುತ್ತಿದೆ.
ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲ್ಲಿಸುವ ಪಣ ತೊಟ್ಟಿದ್ದರೆ, ಟಿಎಂಸಿಯ ಮಮತಾ ಬ್ಯಾನರ್ಜಿ ಅವರು ಟಿಎಂಸಿಯನ್ನು ಮತ್ತೊಮ್ಮೆ ಆಡಳಿತಕ್ಕೆ ತಂದೇ ತರುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ.
ಚುನಾವಣಾ ಪ್ರಚಾರಗಳ ನಡುವೆ ಸಂಗೀತ ಉತ್ಸವವನ್ನು ನಡೆಸಲಾಗುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಉತ್ಸವಕ್ಕೆ ಚಾಲನೆ ನೀಡಿ ಖ್ಯಾತ ಸಂತಲ್ ನರ್ತಕಿ ಬಸಂತಿ ಹೆಂಬ್ರಾಮ್ ಜತೆ ಹೆಜ್ಜೆ ಹಾಕಿದ್ದಾರೆ.
ಸದ್ಯ ದೀದೀ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
PublicNext
24/12/2020 05:37 pm