ನವದೆಹಲಿ: ಇಂದು ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ 96ನೇ ಜಯಂತಿ. ಅವರ ಜನ್ಮದಿನವನ್ನು ಉತ್ತಮ ಆಡಳಿತ ದಿನವೆಂದು ಆಚರಿಸಲಾಗುತ್ತಿದೆ.
'ಅಜಾತಶತ್ರು' ನಾಯಕನ ಜನ್ಮದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಸೇರಿದಂತೆ ಗಣ್ಯರು ವಾಜಪೇಯಿ ಅವರಿಗೆ ಗೌರವ ಸಲ್ಲಿಸಿದರು. ದೆಹಲಿಯ ರಾಷ್ಟ್ರೀಯ ಸ್ಮೃತಿ ಸ್ಥಳದ ಬಳಿ ನಿರ್ಮಾಣ ಮಾಡಿರುವ ಸದೈವ್ ಅಟಲ್ ಸ್ಮಾರಕಕ್ಕೆ ಪ್ರಧಾನಿ ಮೋದಿ ಸಹಿತ ಗಣ್ಯರು ತೆರಳಿ ವಾಜಪೇಯಿ ಸಮಾಧಿಗೆ ಪೂಜೆ ಮಾಡಿ ಪುಷ್ಪ ನಮನ ಸಲ್ಲಿಸಿದರು.
ವಾಜಪೇಯಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಿಜೆಪಿ ರೈತರ ದಿನಾಚರಣೆಯನ್ನು ಹಮ್ಮಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ 12 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದೇ ವೇಳೆ ಕರ್ನಾಟಕದ 58 ಲಕ್ಷ ರೈತರು ಸೇರಿದಂತೆ ದೇಶದ 9.50 ಕೋಟಿ ರೈತರ ಬ್ಯಾಂಕ್ ಖಾತೆಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ತಲಾ 2,000 ರೂ. ಆನ್‌ಲೈನ್ ಮೂಲಕ ಜಮಾ ಮಾಡಲಿದ್ದಾರೆ.
PublicNext
25/12/2020 10:32 am