ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇಶದ ಅತಿ ಕಿರಿಯ ವಯಸ್ಸಿನ ಮೇಯರ್ ಆರ್ಯ ರಾಜೇಂದ್ರನ್

ತಿರುವನಂತಪುರಂ : ಕೇವಲ 21 ವಯಸ್ಸಿನಲ್ಲೇ ಕೇರಳ ರಾಜಧಾನಿ ತಿರುವನಂತಪುರಂ ಮಹಾನಗರ ಪಾಲಿಕೆಯ ಮೇಯರ್ ಆಗಿ ಆರ್ಯ ರಾಜೇಂದ್ರನ್ ಆಯ್ಕೆಯಾಗಿದ್ದಾರೆ.

ಆ ಮೂಲಕ ದೇಶದ ಅತಿ ಕಿರಿಯ ವಯಸ್ಸಿನ ಮೇಯರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇತ್ತೀಚೆಗೆ ತಿರುವನಂತಪುರಂ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ಸಿಪಿಎಂ ಪಕ್ಷದಿಂದ ಆರ್ಯ ರಾಜೇಂದ್ರನ್ ಸ್ಪರ್ಧಿಸಿದ್ದರು.

ಮುಡವನ್ ಮುಗಳ್ ವಾರ್ಡ್ನಿಂದ ಆಯ್ಕೆಯಾಗಿದ್ದ ಆರ್ಯ ರಾಜೇಂದ್ರನ್ ಹೆಸರನ್ನು ಸಿಪಿಎಂ ಜಿಲ್ಲಾ ಕಾರ್ಯಾಲಯವು ತಿರುವನಂತಪುರಂ ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಶಿಫಾರಸು ಮಾಡಿತ್ತು.

ಇದೀಗ 21 ವರ್ಷದ ಆರ್ಯ ರಾಜೇಂದ್ರನ್ ಅವರು ಕೇರಳ ರಾಜಧಾನಿಯ ಮೇಯರ್ ಆಗಿ ಆಯ್ಕೆ ಆಗುವ ಮೂಲಕ ದೇಶದ ಅತಿ ಕಿರಿಯ ವಯಸ್ಸಿನ ಮೇಯರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Edited By : Nirmala Aralikatti
PublicNext

PublicNext

25/12/2020 05:55 pm

Cinque Terre

108.04 K

Cinque Terre

7

ಸಂಬಂಧಿತ ಸುದ್ದಿ