ಬೆಂಗಳೂರು : ಅಕ್ಟೋಬರ್ 28ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಿದೆ.
ಕರ್ನಾಟಕ ಹಾಗೂ ಬಿಹಾರದ ವಿಧಾನ ಪರಿಷತ್ ಚುನಾವಣೆಗೆ ಭಾರತೀಯ ಜನತಾ ಪಕ್ಷ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.
ರಾಜ್ಯದಲ್ಲಿ ಪದವೀಧರ ಕ್ಷೇತ್ರಕ್ಕೆ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ತಲಾ ಇಬ್ಬರು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ಅಭ್ಯರ್ಥಿಗಳ ವಿವರ ಹೀಗಿದೆ..
ಆಗ್ನೇಯ ಪದವೀಧರ ಕ್ಷೇತ್ರ - ಎಂ.ಚಿದಾನಂದಗೌಡ.
ಪಶ್ಚಿಮ ಪದವೀಧರ ಕ್ಷೇತ್ರ - ಎಸ್.ವಿ.ಸಂಕನೂರು.
ಬೆಂಗಳೂರು ಶಿಕ್ಷಕರ ಕ್ಷೇತ್ರ - ಪುಟ್ಟಣ್ಣ.
ಈಶಾನ್ಯ ಶಿಕ್ಷಕರ ಕ್ಷೇತ್ರ - ಶಶಿಲ್ ನಮೋಶಿ.
ಅದೇ ರೀತಿಯಲ್ಲಿ ಬಿಹಾರದಲ್ಲಿ ಬಿಜೆಪಿ ಶಿಕ್ಷಕರ ಕ್ಷೇತ್ರಗಳಿಗೆ ನಾಲ್ಕು ಮತ್ತು ಪದವೀಧರ ಕ್ಷೇತ್ರಕ್ಕೆ ಓರ್ವ ಅಭ್ಯರ್ಥಿಯ ಹೆಸರನ್ನು ಘೋಷಿಸಿದೆ.
PublicNext
04/10/2020 12:05 pm