ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಬಿಜೆಪಿ ಸರ್ಕಾರ ಪಣತೊಟ್ಟಿದೆ: ಈಶ್ವರಪ್ಪ

ಶಿವಮೊಗ್ಗ: ಡ್ರಗ್ಸ್‌ ಮುಕ್ತ ಕರ್ನಾಟಕಕ್ಕೆ ಬಿಜೆಪಿ ಸರ್ಕಾರ ಪಣತೊಟ್ಟಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ನಗರದ ಶಿವಪ್ಪನಾಯಕ ವೃತ್ತದ ಬಳಿ ಬಿಜೆಪಿ ಯುವ ಮೋರ್ಚಾ ಆಯೋಜಿಸಿದ್ದ ಡ್ರಗ್ಸ್ ಮುಕ್ತ ಕರ್ನಾಟಕ ಸಹಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡ್ರಗ್ಸ್ ಸೇವನೆ ಪ್ರಕರಣದಲ್ಲಿ ಚಿತ್ರ ನಟಿಯರು ಹಾಗೂ ಅವರಿಗೆ ಡ್ರಗ್ಸ್ ಪೂರೈಸಿದವರು ಈಗಾಗಲೇ ಜೈಲಿನಲ್ಲಿದ್ದು, ಈ ಪ್ರಕರಣದಲ್ಲಿ ಇನ್ನೂ ಅನೇಕ ಪ್ರಭಾವಿ ವ್ಯಕ್ತಿಗಳು ಇದ್ದಾರೆ. ಯಾರೇ ಪ್ರಭಾವಿಗಳು ಇದ್ದರೂ ಎಲ್ಲರನ್ನೂ ಜೈಲಿಗೆ ಕಳುಹಿಸುತ್ತೇವೆ. ಡ್ರಗ್ಸ್ ಮುಕ್ತ ಕರ್ನಾಟಕ ಸಹಿ ಅಭಿಯಾನ ಕಾರ್ಯಕ್ರಮವೇ ನಮ್ಮ ಸಂಸ್ಕೃತಿಗೆ ನಾಚಿಕೆಗೇಡು ಎಂದರು.

ಅನೇಕ ವರ್ಷಗಳಿಂದ ಡ್ರಗ್ಸ್, ಮಾದಕ ವಸ್ತು ಸೇವನೆ ಹಾಗೂ ಲೈಂಗಿಕ ಚಟುವಟಿಕೆ ನಡೆಯುತ್ತಿದೆ. ಕರ್ನಾಟಕಕ್ಕೆ ವಿವಿಧ ರಾಜ್ಯ ಹಾಗೂ ವಿದೇಶದಿಂದ ಡ್ರಗ್ಸ್ ಸರಬರಾಜು ಆಗುತ್ತಿದೆ. ಇದರ ವಿರುದ್ಧ ಬಿಜೆಪಿ ಸರ್ಕಾರ ಒಂದು ದಿಟ್ಟ ನಿಲುವು ಕೈಗೊಂಡಿದ್ದು, ರಾಜ್ಯದಲ್ಲಿ ಇನ್ನು ಮುಂದೆ ಡ್ರಗ್ಸ್ ಇರಬಾರದು ಎಂಬ ತೀರ್ಮಾನವನ್ನು ಸರ್ಕಾರ ತೆಗೆದುಕೊಂಡಿದೆ ಎಂದು ಹೇಳಿದರು.

Edited By : Vijay Kumar
PublicNext

PublicNext

03/10/2020 04:34 pm

Cinque Terre

54.08 K

Cinque Terre

1