ಬೆಳಗಾವಿ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದ, ಕಾಂಗ್ರೆಸ್ ಮುಖಂಡ ಬಿ.ಎನ್. ಚಂದ್ರಪ್ಪ ಅವರನ್ನು ಹಾಗೂ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ, ಮಹಿಳಾ ಕಾಂಗ್ರೆಸ್ ರಾಜ್ಯ ಮಾಜಿ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
'ಮಾಧ್ಯಮಗಳಲ್ಲಿ ನಮ್ಮ ವಿಚಾರ ಮತ್ತು ದೃಷ್ಟಿಕೋನ ಪರಿಣಾಮಕಾರಿಯಾಗಿ ಬಿಂಬಿತವಾಗಬೇಕಾಗಿರುವುದು ಅಗತ್ಯವಾಗಿದೆ.
ಹೀಗಾಗಿ, ಅವರಿಗೆ ಇರುವ ಅನುಭವ ಮತ್ತು ವಿಷಯವನ್ನು ಸಮರ್ಥವಾಗಿ ಮಂಡಿಸುವ ಸಾಮರ್ಥ್ಯ ಗಮನಿಸಿ ಈ ನೇಮಕ ಮಾಡಲಾಗಿದೆ' ಎಂದು ಮಾಹಿತಿ ನೀಡಿದ್ದಾರೆ.
PublicNext
22/09/2020 02:15 pm