ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವೆಂಬರ್ ತಿಂಗಳಲ್ಲಿ ದಾಖಲೆಯ ಜಿಎಸ್‌ಟಿ ಸಂಗ್ರಹ

ನವದೆಹಲಿ: ನವೆಂಬರ್‌ ತಿಂಗಳಲ್ಲಿ ಒಟ್ಟು 1,31,526 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದೆ. ಇದು ಅಕ್ಟೋಬರ್ ತಿಂಗಳ ಸಂಗ್ರಹವನ್ನು ಮೀರಿದ್ದು ನೂತನ ದಾಖಲೆ ಎಂದು ಪರಿಗಣಿಸಲಾಗಿದೆ.

ಅಕ್ಟೋಬರ್ ತಿಂಗಳಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹ 1,30,127 ಕೋಟಿ ರೂ. ಅಕ್ಟೋಬರ್ ತಿಂಗಳು ಸಾಮಾನ್ಯವಾಗಿ ಹಬ್ಬದ ಸೀಸನ್‌ನಿಂದಾಗಿ ಬೇಡಿಕೆಯ ಹೆಚ್ಚಳವು ಜಿಎಸ್‌ಟಿ ರೂಪದಲ್ಲಿ ಸಂಗ್ರಹದಲ್ಲಿ ಸ್ಪಷ್ಟವಾಗಿ ಗೋಚರಿಸದೆ. ಇನ್ನು 2021ರ ನವೆಂರ್ನಲ್ಲಿ ಒಟ್ಟು ಜಿಎಸ್‌ಟಿ ಆದಾಯವು 1,31,526 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ. ಇದರಲ್ಲಿ CGST 23,978 ಕೋಟಿ, SGST 31,127 ಕೋಟಿ, IGST 66,815 ಕೋಟಿ (ಸರಕುಗಳ ಆಮದಿನ ಮೇಲೆ ಸಂಗ್ರಹಿಸಲಾದ 32,165 ಕೋಟಿ ಸೇರಿದಂತೆ) ಮತ್ತು ಸೆಸ್ ಒಳಗೊಂಡಿದೆ.

ಜಿಎಸ್‌ಟಿ ಅನುಷ್ಠಾನದ ನಂತರ ಇದು ಎರಡನೇ ಅತಿ ಹೆಚ್ಚು. ಹಣಕಾಸು ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶಗಳಲ್ಲಿ ಈ ಮಾಹಿತಿ ಹೊರಬಿದ್ದಿದೆ.

Edited By : Nagaraj Tulugeri
PublicNext

PublicNext

02/12/2021 07:31 am

Cinque Terre

28.67 K

Cinque Terre

0

ಸಂಬಂಧಿತ ಸುದ್ದಿ