ಬೆಂಗಳೂರು : ಆಡಳಿತ ಪಕ್ಷವಾಗಿ ನೀವು ಕೆಲಸ ಮಾಡಲು ಯೋಗ್ಯರಲ್ಲ ಎಂದು ಜನ 2018 ರಲ್ಲಿ ತೀರ್ಮಾನ ಮಾಡಿದರು. ಕನಿಷ್ಠ ವಿರೋಧ ಪಕ್ಷವಾಗಿಯಾದರೂ ಕಾಂಗ್ರೆಸ್ ಪಕ್ಷ ಕೆಲಸ ಮಾಡಬೇಕಿತ್ತು. ವಿರೋಧ ಪಕ್ಷವಾಗಿಯೂ ಕಾಂಗ್ರೆಸ್ ವಿಫಲವಾಗಿದೆ. ಮಾರ್ಚ್ 4ರಂದು ಬಜೆಟ್ ಮಂಡಿಸೋದಕ್ಕೆ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕಾರಣದ ಮುಸುಕು ಅವರ ಹಾಗೂ ಅವರ ಪಕ್ಷದ ಮೇಲೆ ಬಿದ್ದಿದೆ. ಎಲ್ಲವನ್ನೂ ರಾಜಕೀಯವಾಗಿ ನೋಡುವುದು, ಧ್ವೇಷದಿಂದ ನೋಡುವುದರಿಂದ ಅವರಿಗಾಗಲಿ, ಅವರ ಪಕ್ಷಕ್ಕಾಗಲಿ ರಾಜಕೀಯ ಭವಿಷ್ಯವಿಲ್ಲ. ಸದನ ಶಕ್ರವಾರದವರಿಗೂ ನಡೆಯಬೇಕಿತ್ತು. ಸದನವನ್ನು ಇಂದೇ ಮೊಟಕುಗೊಳಿಸಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದ್ದು ಬೇಸರದ ಸಂಗತಿ. ವಿರೋಧ ಪಕ್ಷದವರು ಸದನ ಕರೆಯಿರಿ ಚರ್ಚಿಸಬೇಕು ಎನ್ನುತ್ತಾರೆ. ಅಧಿವೇಶನ ನಡೆಯುವಾಗ ಚರ್ಚೆ ಮಾಡಲು ಅವರು ತಯಾರಿಲ್ಲ. ಯಾವುದೇ ವಿಚಾರವನ್ನೇ ಆಗಲಿ ಚರ್ಚೆ ಹಾಗೂ ವಾದ ಮಾಡಬಹುದು ಎಂದರು.
PublicNext
22/02/2022 07:49 pm