ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯಾದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಚೊಚ್ಚಲ ಬಜೆಟ್ನಲ್ಲಿ ಹಲವು ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.
ಹಾಲಿನ ಪ್ರೋತ್ಸಾಹಧನ ಹೆಚ್ಚಳ, ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಸೇರಿದಂತೆ ಮಹತ್ವದ ಯೋಜನೆಗಳನ್ನು ಘೋಷಿಸುವ ನಿರೀಕ್ಷೆ ಇದೆ.
ಕೋವಿಡ್ ಹೊಡೆತದಿಂದ ರಾಜ್ಯದ ಬೊಕ್ಕಸಕ್ಕೆ ನಷ್ಟವಾಗಿದ್ದು, ಆರ್ಥಿಕತೆಗೆ ಅನುಗುಣವಾಗಿ ಬಜೆಟ್ ಮಂಡನೆಯಾಗಲಿದ್ದು, ಸಂಪನ್ಮೂಲಗಳ ಕ್ರೂಢೀಕರಣ, ಹೊಸ ಯೋಜನೆಗಳ ಘೋಷಣೆ ಹಾಗೂ ಅಭಿವೃದ್ಧಿಪರ ಕಾರ್ಯಕ್ರಮಗಳ ಅನುಷ್ಠಾನದ ದೊಡ್ಡ ಸವಾಲು ಬೊಮ್ಮಾಯಿ ಮುಂದಿದೆ.
ಒಟ್ಟಿನಲ್ಲಿ ರಾಜ್ಯದ ಜನತೆಗೆ ಬಜೆಟ್ ಮೇಲೆ ಕೌತುಕ ಹೆಚ್ಚಾಗಿದ್ದು ಎಲ್ಲಾ ಪ್ರಶ್ನೆಗಳಿಗೂ ಇಂದು ಉತ್ತರ ಸಿಗಲಿದೆ.
PublicNext
04/03/2022 08:05 am