ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕರ್ನಾಟಕ ಸರ್ಕಾರ 2022-23ನೇ ಬಜೆಟ್ : ಕಾರ್ಮಿಕರ ಕ್ಷೇಮಾಭಿವೃದ್ಧಿಗೆ ಒತ್ತು

ಬೆಂಗಳೂರು : 2.30 ಲಕ್ಷ ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2610 ಕೋಟಿ ರೂ.ಗಳ ಯೋಜನೆಗಳ ಅನುಷ್ಠಾನ.

* ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಪ್ರಾರಂಭ.

* ಕಟ್ಟಡ ಕಾರ್ಮಿಕರ ರಿಯಾಯಿತ್ ಬಸ್ ಪಾಸ್ ಯೋಜನೆ ರಾಜ್ಯಾದ್ಯಂತ ವಿಸ್ತರಣೆ

* ಕೇಂದ್ರ ಸರ್ಕಾರದ ನೆರವಿನೊಂದಿಗೆ ಹುಬ್ಬಳ್ಳಿ ಮತ್ತು ದಾವಣೆಗೆರೆ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗಳ ಹಾಸಿಗೆಗಳ ಸಾಮರ್ಥ್ಯ 100ಕ್ಕೆ ಹೆಚ್ಚಳ, 19 ಹೊಸ ಚಿಕಿತ್ಸಾಲಯಗಳ ಪ್ರಾರಂಭ.

* ಯೆಲ್ಲೋ ಬೋರ್ಡ್ ಚಾಲಕರ ಮಕ್ಕಳ ಉನ್ನತ ಶಿಕ್ಷಣಕ್ಕೆ ವಿದ್ಯಾನಿಧಿ ಯೋಜನೆ, ಆರೋಗ್ಯ ಸೌಲಭ್ಯಕ್ಕೆ ವಿಶೇಷ ಯೋಜನೆ.

ನೇಕಾರರ ಹಿತರಕ್ಷಣೆ

* ನೇಕಾರರ ಸಮ್ಮಾನ್ ಯೋಜನೆಯಡಿ ನೋಂದಾಯಿತ ಕೈಮಗ್ಗ ನೇಕಾರರ ವಾರ್ಷಿಕ ನೆರವು 5,000 ರೂ. ಗಳಿಗೆ ಹೆಚ್ಚಳ

* ರಾಜ್ಯದ ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕ್ ಗಳ ಮೂಲಕ ನೇಕಾರರು ಪಡೆಯುವ ಸಾಲದ ಮೇಲೆ ಶೇ.8ರಷ್ಟು ಬಡ್ಡಿ ಸಹಾಯಧನ ಸೌಲಭ್ಯ.

* ನೇಕಾರರ ಮಕ್ಕಳಿಗೆ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನ ಯೋಜನೆ.

Edited By : Nirmala Aralikatti
PublicNext

PublicNext

04/03/2022 01:41 pm

Cinque Terre

47.95 K

Cinque Terre

4

ಸಂಬಂಧಿತ ಸುದ್ದಿ