ಬೆಂಗಳೂರು : ಯಾತ್ರಾಸ್ಥಳ ಶ್ರೀಶೈಲದಲ್ಲಿ 85 ಕೋಟಿ ರೂ. ವೆಚ್ಚದಲ್ಲಿ ಯಾತ್ರಿ ನಿವಾಸ ಸಂಕೀರ್ಣ ನಿರ್ಮಾಣ, ಮೊದಲ ಹಂತದ ಕಾಮಗಾರಿಗೆ 45 ಕೋಟಿ ರೂ. ಅನುದಾನ.
* ಪುಣ್ಯ ಕ್ಷೇತ್ರಗಳಿಗೆ ಕಡಿಮೆ ಖರ್ಚಿನಲ್ಲಿ ಪ್ರವಾಸ ಕೈಗೊಳ್ಳಲು ಕೆ.ಎಸ್.ಟಿ.ಡಿ.ಸಿ. ರೂಪಿಸಲಾಗುವುದು.
* ರಾಜ್ಯದಿಂದ ಕಾಶಿ ಯಾತ್ರೆಯನ್ನು ಕೈಗೊಳ್ಳುವ ಸುಮಾರು 30,000 ಯಾತ್ರಾರ್ಥಿಗಳಿಗೆ ಸರ್ಕಾರದಿಂದ ಸಹಾಯಧನ. ತಲಾ 5,000 ರೂ.ಗಳ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಕೊಲ್ಲೂರು, ತಿರುಪತಿ, ಮಂತ್ರಾಲಯ, ಮೇಲ್ಮರವತ್ತೂರು ಇನ್ನಿತರ ಸ್ಥಳಗಳಿಗೆ ಪ್ಯಾಕೇಜ್ ಟ್ರಿಪ್ ಸೇವೆ ಪ್ರಾರಂಭ.
ದೇವಾಲಯಗಳಿಗೆ ಸ್ವಾಯತ್ತತೆ, ತಸ್ತೀಕ್ ಮೊತ್ತ ಹೆಚ್ಚಳ ಮಾಡಲಾಗಿದೆ.
* ಭಕ್ತಾದಿಗಳ ಬಹುಕಾಲದ ಬೇಡಿಕೆಯಂತೆ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಾಲಯಗಳಿಗೆ ಸ್ವಾಯತ್ತತೆ ನೀಡಲು ಕ್ರಮ.
* 2021-22 ರಾಜ್ಯದಲ್ಲಿರುವ ದೇವಾಲಯಗಳ ಅಭಿವೃದ್ಧಿಗೆ ಸಾಲಿನಲ್ಲಿ 168 ಕೋಟಿ ರೂ.ಗಳ ಕಾಮಗಾರಿಗಳಿಗೆ ಅನುಮೋದನೆ. ಪ್ರಸಕ್ತ ಸಾಲಿನಲ್ಲಿ 25 ಕೋಟಿ ರೂ. ವೆಚ್ಚ.
* ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳ ತಸ್ತಿಕ್ ಮೊತ್ತ 60,000 ರೂ.ಗಳಿಗೆ ಹೆಚ್ಚಳ
* ಭಕ್ತಾದಿಗಳಿಗೆ ಆನ್ಲೈನ್ ಮುಖಾಂತರ ವಿವಿಧ ಸೇವೆಗ ಒದಗಿಸಲು ತಂತ್ರಾಂಶ ಜಾರಿ
PublicNext
04/03/2022 01:51 pm