ಬೆಂಗಳೂರು: ಚೆನ್ನೈನಲ್ಲಿರುವ ಅಮೆರಿಕದ ಕಾನ್ಸುಲ್ ಜನರಲ್ ಜುಡಿತ್ ಜಾವಿನ್ ಅವರು ಮಾಹಿತಿ ತಂತ್ರಜ್ಞಾನ ಸಚಿವ ಹಾಗೂ ಡಿಸಿಎಂ ಡಾ. ಸಿ. ಎನ್ ಅಶ್ವತ್ಥ ನಾರಾಯಣ ಆವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಹೂಡಿಕೆಗೆ ಇರುವ ಅವಕಾಶಗಳು, ಮಾಹಿತಿ ತಂತ್ರಜ್ಞಾನ ಕಾರ್ಯನೀತಿ ಹಾಗೂ ಮತ್ತಿತರ ಅಂಶಗಳ ಬಗ್ಗೆ ಮಾಹಿತಿ ಪಡೆದರು.
ಈ ವೇಳೆ ಮಾತನಾಡಿದ ಡಿಸಿಎಂ ಅಶ್ವತ್ಥ ನಾರಾಯಣ, ರಾಜ್ಯದಲ್ಲಿರುವ ಅಮೆರಿಕ ಮೂಲದ ಕಂಪನಿಗಳು ಗುಣಮಟ್ಟದಿಂದ ಕಾರ್ಯನಿರ್ವಹಿಸುತ್ತಿವೆ. ಇನ್ನೂ ಹೆಚ್ಚಿನ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಅವಕಾಶಗಳಿವೆ. ಇದಕ್ಕಾಗಿ ರಾಜ್ಯ ಸರ್ಕಾರ ಸಹಭಾಗಿತ್ವ ಸೇರಿ ಯಾವುದೇ ರೀತಿಯಲ್ಲಿ ಸಹಕರಿಸಲು ನಾವು ತಯಾರಿದ್ದೇವೆ ಎಂದರು.
PublicNext
01/02/2021 11:26 pm