ವಿಜಯನಗರ: ದೇಶದಲ್ಲಿ ಈಗ ಬೇರೆ ಪಕ್ಷದ ಪ್ರಧಾನಿ ಇದ್ದಿದ್ದರೆ ಪ್ರತಿ ಲೀಟರ್ ಪೆಟ್ರೋಲ್‌ಗೆ ರೂ.30 ಆಗ್ತಾ ಇರಲಿಲ್ಲ. ಈಗಿನ ಪರಿಸ್ಥಿತಿಯಲ್ಲಿ ಬೇರೆ ಯಾವುದೇ ಪಕ್ಷದವರು ಇದ್ದಿದ್ದರೂ ತೈಲ ಬೆಲೆ ಹೆಚ್ಚುತ್ತಾ ಇರ್ತಿತ್ತು ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ. ವಿಜಯನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿಯಿಂದ ಬೇಸತ್ತ ಕಾರಣಕ್ಕೆ ಜನರು ಹಾನಗಲ್‌ನಲ್ಲಿ ಬಿಜೆಪಿಯನ್ನು ಸೋಲಿಸಿದ್ದಾರೆ ಎಂಬುದಾದರೆ ಸಿಂದಗಿ ಉಪಚುನಾವಣೆಯಲ್ಲಿ ಜನ ನಮ್ಮನ್ನು ಯಾಕೆ ಗೆಲ್ಲಿಸಿದರು? ಎಂದು ಆನಂದ್ ಸಿಂಗ್ ಪ್ರಶ್ನಿಸಿದ್ದಾರೆ.
ತೈಲ ಬೆಲೆ ಹೆಚ್ಚಳಕ್ಕೆ ಪ್ರಧಾನಿಯವರನ್ನು ಟೀಕಿಸುವುದು ಸರಿಯಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಾಗುವ ದರ ಏರಿಳಿತವೇ ಇದಕ್ಕೆ ಕಾರಣವಾಗಿದೆ. ಮೋದಿ ಪೂಜೆ-ಪುನಸ್ಕಾರದಲ್ಲಿ ತೊಡಗಿದ್ದಾರೆ. ಬೆಲೆ ಇಳಿಕೆ ಬಗ್ಗೆ ಗಮನ ಹರಿಸುತ್ತಿಲ್ಲ ಎಂಬ ಆರೋಪ ಸರಿಯಿಲ್ಲ ಎಂದು ಆನಂದ್ ಸಿಂಗ್ ಹೇಳಿದ್ದಾರೆ.
PublicNext
03/11/2021 03:52 pm