ಬೆಂಗಳೂರು: ಮಾರ್ಚ್ 04 ರಂದು 2022-23 ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಿರ್ಧರಿಸಿದ್ದಾರೆಂದು ತಿಳಿದು ಬಂದಿದೆ.
ರಾಜ್ಯ ಸರ್ಕಾರ ಈಗಾಗಲೇ ಎಲ್ಲಾ ಇಲಾಖೆಗಳ ಬಜೆಟ್ ಪೂರ್ವ ಸಿದ್ದತೆ ಆರಂಭಿಸಿವೆ. ವಿವಿಧ ಸಂಘ ಸಂಸ್ಥೆಗಳ ಜೊತೆಯೂ ಬಜೆಟ್ ಪೂರ್ವ ಸಭೆ ನಡೆಸಿ ಚರ್ಚಿಸಲು ನಿರ್ಧರಿಸಿದ್ದಾರೆ.
ಮಾರ್ಚ್ 4 ರಂದು ರಾಜ್ಯ ಬಜೆಟ್ ಸಿಎಂ ಬೊಮ್ಮಾಯಿ ಮಂಡಿಸಲಿರುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ಚೊಚ್ಚಲ ಬಜೆಟ್ಗೆ ದಿನಗಣನೆ ಶುರುವಾಗಿದೆ. 2023ಕ್ಕೆ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಬಾರಿಯ ಬಜೆಟ್ ಮೇಲೆ ಜನರ ಹಲವು ನಿರೀಕ್ಷೆ ಹೊಂದಿದ್ದಾರೆ. ಜನಪ್ರಿಯ ಬಜೆಟ್ ಮಂಡನೆಗೆ ಸರ್ಕಾರ ಕೂಡ ಭರ್ಜರಿ ತಯಾರಿ ನಡೆಸಿದೆ.
PublicNext
18/02/2022 03:21 pm